Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎನ್‌ಐಎ ಪಟ್ಟಿ ಬಿಡುಗಡೆ : ಕಡಬದ...

ಎನ್‌ಐಎ ಪಟ್ಟಿ ಬಿಡುಗಡೆ : ಕಡಬದ ಜಯಪ್ರಕಾಶ್ 'ಮೋಸ್ಟ್ ವಾಂಟೆಡ್'

ವಾರ್ತಾಭಾರತಿವಾರ್ತಾಭಾರತಿ21 Oct 2018 6:09 PM IST
share
ಎನ್‌ಐಎ ಪಟ್ಟಿ ಬಿಡುಗಡೆ : ಕಡಬದ ಜಯಪ್ರಕಾಶ್ ಮೋಸ್ಟ್ ವಾಂಟೆಡ್

ಕಡಬ, ಅ.21. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 258 ಮಂದಿ ಮೋಸ್ಟ್ ವಾಂಟೆಡ್ ಆರೋಪಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅದರಲ್ಲಿ ಗೋವಿಂದ ಪನ್ಸಾರೆ ಹತ್ಯೆ, ಮಾಲೆಂಗಾವ್ ಸ್ಫೋಟ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿ, ಸನಾತನ ಸಂಸ್ಥಾದಲ್ಲಿ ಗುರುತಿಸಿಕೊಂಡಿದ್ದ ಕಡಬದ ಜಯಪ್ರಕಾಶ್ ಅಲಿಯಾಸ್ ಅಣ್ಣಾ(47)ನ ಹೆಸರು ಕೂಡಾ ಸೇರಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಟ್ಟತ್ತಡ್ಕ ನಿವಾಸಿ ಸೋಮರಾಜನ್ ಎಂಬವರ ಪುತ್ರ ಜಯಪ್ರಕಾಶ್ ಅಲಿಯಾಸ್ ಅಣ್ಣಾ, ಗೋವಾದ ಮಡಂಗಾವ್ ಎಂಬಲ್ಲಿ 2009ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ಆ ಬಳಿಕ ತಲೆಮರೆಸಿಕೊಂಡಿದ್ದಾನೆ. ವೃತ್ತಿಯಲ್ಲಿ ಇಲೆಕ್ಟ್ರಿಷಿಯನ್ ಆಗಿದ್ದ ಜಯಪ್ರಕಾಶ್ ಬಳಿಕ ಮುಲ್ಕಿಯಲ್ಲಿ ಸನಾತನ ಸಂಸ್ಥಾದ ವಾಹನದಲ್ಲಿ ಚಾಲಕನಾಗಿದ್ದ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕು ಕಕ್ಕಿಂಜೆ ತೋಟತ್ತಾಡಿಯಿಂದ ಮದುವೆಯಾಗಿದ್ದ ಈತನಿಗೆ ಒಂದು ಮಗು ಕೂಡ ಇದೆಯೆನ್ನಲಾಗಿದೆ. ಆ ನಂತರ ಊರು ಬಿಟ್ಟಿದ್ದ ಈತ ಮನೆಯವರ ಸಂಪರ್ಕಕ್ಕೂ ಸಿಗದೆ, ಸದ್ಯ ಈನ ಬಗ್ಗೆ ಯಾರಿಗೂ ಮಾಹಿತಿ ಇಲ್ಲವಾಗಿದೆ.

2013ರ ಸೆಪ್ಟಂಬರ್ 18ರಂದು ಹೈದರಾಬಾದ್‌ನಿಂದ ಕಡಬಕ್ಕೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಜಯಪ್ರಕಾಶ್ ಭಾವಚಿತ್ರದ ಪೋಸ್ಟರ್‌ಗಳನ್ನು ಕಂದಾಯ ಇಲಾಖೆಯ ಗೋಡೆಗೆ ಹಚ್ಚಿ ಮಹಜರು ನಡೆಸಿದ್ದರು.

ಲಿಸ್ಟ್‌ನಲ್ಲಿ 258 ಮಂದಿ
ಎನ್‌ಐಎ ಶನಿವಾರ ಪ್ರಕಟಿಸಿದ ಪಟ್ಟಿಯಲ್ಲಿ ಒಟ್ಟು 258 ಮಂದಿ ಹೆಸರುಗಳಿದ್ದು, ಅವರಲ್ಲಿ 15 ಮಂದಿ ಮಹಿಳೆಯರು. ಎನ್‌ಐಎ ಪಟ್ಟಿಯಲ್ಲಿರುವ 57 ಮಂದಿಯ ತಲೆಗೆ ಬಹುಮಾನ ಘೋಷಿಸಲಾಗಿದೆ. ನಿಷೇಧಿತ ಮಾವೋವಾದಿ ಗುಂಪಿನ ಉನ್ನತ ನಾಯಕರಲ್ಲೊಬ್ಬನಾದ ಮುಪಲ್ಲಾ ಲಕ್ಷ್ಮಣ್‌ರಾವ್‌ನ ತಲೆಗೆ ಗರಿಷ್ಠ 15 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಆತನ ಸಂಭಾವ್ಯ ಉತ್ತರಾಧಿಕಾರಿಯೆನ್ನಲಾದ ನಂಬಾಲ ಕೇಶವ ರಾವ್ ಯಾನೆ ಬಸವರಾಜ್ ಕೂಡಾ ಪಟ್ಟಿಯಲ್ಲಿದ್ದು, ಆತನ ತಲೆಗೆ 10 ಲಕ್ಷ ರೂ. ಘೋಷಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆಯು ಲಷ್ಕರೆ ಉಗ್ರ ಸಂಘಟನೆಯ ಮುಖ್ಯಸ್ಥ ರಹ್ಮಾನ್ ಲಖ್ವಿ, ಹಫೀಝ್ ಸೈಯದ್ ಸಹಿತ ಹಲವರ ಹೆಸರನ್ನು ಮೋಸ್ಟ್ ವಾಂಟೆಡ್ ಪಟ್ಟಿಗೆ ಸೇರ್ಪಡೆಗೊಳಿಸಿದೆ.ಅವರಲ್ಲಿ ಹೆಚ್ಚಿನವರಿಗೆ ರೆಡ್‌ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಈ ಹೆಸರುಗಳನ್ನು ಎನ್‌ಐಎ ವೆಬ್‌ಸೈಟ್ ಹಾಗೂ ಟ್ವಿಟರ್ ಅಕೌಂಟ್‌ನಲ್ಲಿ ಫೋಟೊ ಸಮೇತ ಪೋಸ್ಟ್ ಮಾಡಿದೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಸುಳಿವು ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಪಟ್ಟಿಯಲ್ಲಿರುವವರಲ್ಲಿ 15 ಮಂದಿ ಪಾಕಿಸ್ತಾನದವರಾಗಿದ್ದಾರೆ. ಇವರ ಪೈಕಿ ಹಿಜ್ಬುಲ್ ಉಗ್ರ ಜುನೈದ್ ಅಕ್ರಂ ಮಲಿಕ್‌ನ ತಲೆಗೆ ಎನ್‌ಐಎ 10 ಲಕ್ಷ ರೂ. ಬಹುಮಾನ ಪ್ರಕಟಿಸಿದೆ. ಸಿಬಿಐ, ಎನ್‌ಐಎ ಹಾಗೂ ಗುಪ್ತಚರ ದಳ (ಐಬಿ) ಹಾಗೂ ವಿವಿಧ ಕಾನೂನು ಅನುಷ್ಠಾನ ಸಂಸ್ಥೆಗಳ ಸಮಾಲೋಚನೆಯೊಂದಿಗೆ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X