Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿಯ ರಾಜಕೀಯ ಲಾಭಕ್ಕಾಗಿ ಧರ್ಮಗಳ...

ಬಿಜೆಪಿಯ ರಾಜಕೀಯ ಲಾಭಕ್ಕಾಗಿ ಧರ್ಮಗಳ ಮಧ್ಯೆ ವೈಷಮ್ಯ: ಸಚಿವೆ ಡಾ. ಜಯಮಾಲಾ

ವಾರ್ತಾಭಾರತಿವಾರ್ತಾಭಾರತಿ21 Oct 2018 8:12 PM IST
share
ಬಿಜೆಪಿಯ ರಾಜಕೀಯ ಲಾಭಕ್ಕಾಗಿ ಧರ್ಮಗಳ ಮಧ್ಯೆ ವೈಷಮ್ಯ: ಸಚಿವೆ ಡಾ. ಜಯಮಾಲಾ

ಬೈಂದೂರು, ಅ.21: ಬಿಜೆಪಿ ಧರ್ಮ ಧರ್ಮಗಳ ಮಧ್ಯೆ ವೈಷಮ್ಯ ಮೂಡಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆಸುತ್ತಿದೆ. ಜನತೆ ಇದಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಬೈಂದೂರು ರೋಟರಿ ಭವನದಲ್ಲಿ ರವಿವಾರ ಆಯೋಜಿಸಲಾದ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡು ತಿದ್ದರು.

ಧರ್ಮದ ಹೆಸರಿನಲ್ಲಿ ಸಮುದಾಯಗಳ ನಡುವೆ ಪ್ರತ್ಯೇಕತೆ ಸೃಷ್ಟಿಸಿ ರಾಜಕೀಯದ ಬೇಳೆ ಬೇಯಿಸಿಕೊಳ್ಳುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿ ಪಾಠ ಕಲಿಸಬೇಕಾಗಿದೆ. ಪ್ರೀತಿ ಮತ್ತು ವಿಶ್ವಾಸಕ್ಕಿಂತ ದೊಡ್ಡ ಧರ್ಮವಿಲ್ಲ. ಸುಳ್ಳನ್ನು ನೂರಾರು ಬಾರಿ ಹೇಳುವ ಮೂಲಕ ಅದನ್ನು ಸತ್ಯವೆಂಬ ಭ್ರಮೆ ಹುಟ್ಟಿಸಲು ಬಿಜೆಪಿ ಹೊರಟಿದೆ. ಇವರ ವಿರುದ್ಧ ಎರಡೂ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರು ಒಗ್ಗಟ್ಟಾಗಿ ಹೋರಾಟ ನಡೆಸಬೇಕೆಂದು ಅವರು ತಿಳಿಸಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಮ್ಮರವಾಗಿ ಬೆಳೆದಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ. ನೂರಾರು ಭರವಸೆಗಳನ್ನು ನೀಡಿ ಅಧಿಕಾರ ಹಿಡಿದ ಕೇಂದ್ರದ ಬಿಜೆಪಿ ಸರಕಾರ ಈ ಬಗ್ಗೆ ಮಾತನಾಡುತಿಲ್ಲ ಎಂದ ಅವರು, ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಜನಪರ ಆಡಳಿತದ ಮೂಲಕ ಜನರ ಪ್ರೀತಿ ಗಳಿಸಿದೆ. ರೈತರ ಸಾಲಮನ್ನಾ ಸೇರಿದಂತೆ ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಪೂರಕವಾದ ಯೋಜನೆ ರೂಪಿಸಿದೆ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಮಾತನಾಡಿ ಜನ ನಾಯಕರು ಜನಪರ ಕಾರ್ಯಗಳಿಂದ ಗುರುತಿಸಿಕೊಳ್ಳಬೇಕು. ಬಂಗಾರಪ್ಪ ನವರ ಜನಪರ ಕಾರ್ಯಗಳು ಬಡವರ ಬದುಕನ್ನು ಬದಲಿಸಿದೆ. ಅವರ ಆದರ್ಶ ಮೈಗೂಡಿಸಿಕೊಂಡು ಕಾರ್ಯ ನಿರ್ವಹಿಸುವ ಅವಕಾಶವನ್ನು ಕ್ಷೇತ್ರದ ಮತ ದಾರರು ನೀಡಬೇಕು ಎಂದು ಹೇಳಿದರು.

ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ, ಬಿಜೆಪಿ ಅಪಪ್ರಚಾರದ ಮೂಲಕ ಜನರನ್ನು ಮರಳು ಮಾಡುತ್ತಿದೆ. ಜಾತಿಗಳ ನಡುವೆ ವಿಷಬೀಜ ಬಿತ್ತುವ ಪ್ರಯತ್ನಕ್ಕೆ ಮತದಾರರು ಬೆಲೆ ನೀಡಬಾರದು. ಈ ಮೂಲಕ ಬಿಜೆಪಿಯವರ ದುರಾಡಳಿತಕ್ಕೆ ಅಂತ್ಯ ಹಾಡಬೇಕು. ಪರೇಶ್ ಮೇಸ್ತರ ಹೆಸರಿನಲ್ಲಿ ಮತ ಪಡೆದು ಜಯಗಳಿಸಿದ ಬಿಜೆಪಿ ಮುಖಂಡರಿಗೆ ಈವರೆಗೆ ಆ ಪ್ರಕರಣದ ತನಿಖೆ ನಡೆಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ಕಾಪು ಮಾಜಿ ಶಾಸಕ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜನಾದರ್ನ ತೋನ್ಸೆ, ಭಟ್ಕಳದ ಮಾಜಿ ಶಾಸಕ ಮಂಕಾಳ ಎಸ್.ವೈದ್ಯ, ಮಾಜಿ ಶಾಸಕ ಆನಂದ ಆಸ್ನೋಟಿಕರ್, ಕಾಂಗ್ರೆಸ್ ದ.ಕ.ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್, ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ, ಕೆಪಿಸಿಸಿ ಕಾರ್ಯದರ್ಶಿ ಬೆಳಪು ದೇವಿಪ್ರಸಾದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಮದನ್ ಕುಮಾರ್ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ರಾಜು ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X