Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮೊಳಗನ್ನು ಸ್ವಚ್ಛಗೊಳಿಸಿಕೊಂಡರೆ...

ನಮ್ಮೊಳಗನ್ನು ಸ್ವಚ್ಛಗೊಳಿಸಿಕೊಂಡರೆ ಮಾತ್ರ ವಸ್ತುನಿಷ್ಠ ಸುದ್ಧಿ ಕೊಡಬಹುದು: ನ್ಯಾ.ಎನ್.ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ21 Oct 2018 10:16 PM IST
share
ನಮ್ಮೊಳಗನ್ನು ಸ್ವಚ್ಛಗೊಳಿಸಿಕೊಂಡರೆ ಮಾತ್ರ ವಸ್ತುನಿಷ್ಠ ಸುದ್ಧಿ ಕೊಡಬಹುದು: ನ್ಯಾ.ಎನ್.ಸಂತೋಷ್ ಹೆಗ್ಡೆ

ಬೆಂಗಳೂರು, ಅ. 21: ನಮ್ಮೊಳಗನ್ನು ನಾವು ಆಗಾಗ ಸ್ವಚ್ಛಗೊಳಿಸಿಕೊಂಡರೆ ಮಾತ್ರ, ನಿಷ್ಪಕ್ಷಪಾತ ಮತ್ತು ವಸ್ತುನಿಷ್ಠ ಸುದ್ದಿಗಳನ್ನು ಕೊಡಲು ಸಾಧ್ಯ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.

ರವಿವಾರ ನಗರದ ಕಸಾಪದ ಅಕ್ಕಮಹಾದೇವಿ ಸಭಾಂಗಣದಲ್ಲಿ ಎಂ.ವ್ಯೋಮಕೇಶ ಅವರ ‘ಬ್ರೇಕಿಂಗ್ ನ್ಯೂಸ್ ಮರ್ಮ, ಟಿಆರ್‌ಪಿ ಮಂತ್ರ ಹಾಗೂ ಸುದ್ದಿಮನೆ ಸ್ವಾರಸ್ಯಗಳು’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪತ್ರಕರ್ತರಲ್ಲಿ ಆತ್ಮವಿಮರ್ಶೆ ಮಾಡಿಕೊಳ್ಳುವ ಪ್ರವೃತ್ತಿ ಇರಬೇಕು ಹಾಗೂ ಇಂದಿನ ಪತ್ರಕರ್ತರಲ್ಲಿ ಓದಿನ ಕೊರತೆ ಕಾಣುತ್ತಿದೆ. ಸಾಹಿತ್ಯ ಓದಿನಿಂದ ಮಾನವೀಯತೆ ಬೆಳೆಯುತ್ತದೆ. ಮಾನವೀಯ ದೃಷ್ಟಿಕೋನದಲ್ಲಿ ಬರೆಯುವ ಸುದ್ದಿಗಳು ಸಮಾಜಕ್ಕೆ ಪೂರಕವಾಗಿರುತ್ತವೆ ಎಂದು ನುಡಿದರು.

ಎಂ.ವ್ಯೋಮಕೇಶ ಅವರ ಈ ಪುಸ್ತಕದಲ್ಲಿ, ಸುದ್ದಿ ವಾಹಿನಿಗಳ ಟಿಆರ್‌ಪಿ, ಸುದ್ದಿ ವಾಚಕ, ತಪ್ಪು-ಹಾಸ್ಯ ಹಾಗೂ ಸುದ್ದಿ ವಾಹಿನಿಗಳು ಹೇಗೆ, ಕಾರ್ಯ ನಿರ್ವಹಿಸುತ್ತವೆ ಎಂದೆಲ್ಲಾ ಅಂಶಗಳನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಈ ರೀತಿಯ ಪುಸ್ತಕಗಳನ್ನು ಎಲ್ಲರೂ ಓದುವಂತೆ ಆಗಬೇಕು ಎಂದು ಹೇಳಿದರು.

ಹಿರಿಯ ಪತ್ರಕರ್ತ ದೀಪಕ್ ತಿಮ್ಮಯ್ಯ ಮಾತನಾಡಿ, ಪತ್ರಕರ್ತರು ಸಮಾಜ ಸುಧಾರಣೆ ಮಾಡುವ ಅಗತ್ಯವಿಲ್ಲ. ಬದಲಾಗಿ, ಜನರಿಗೆ ಸತ್ಯದ ಮಾಹಿತಿ ತಲುಪಿಸಿದರೆ, ಸಾಕು. ಇನ್ನು ಸುದ್ದಿ ವಾಹಿನಿಗಳು ವೀಕ್ಷಕರನ್ನು ದಿಕ್ಕು ತಪ್ಪಿಸುವುದನ್ನು ಬಿಡಬೇಕು. ಸಾಮಾಜಿಕ ಸಮಸ್ಯೆಗಳ ಕುರಿತು ಮಾತನಾಡಬೇಕು ಎಂದು ಸಲಹೆ ಮಾಡಿದರು.

ಪತ್ರಕರ್ತ ಗೌರಿಶ್ ಅಕ್ಕಿ ಮಾತನಾಡಿ, ಸುದ್ಧಿ ವಾಹಿನಿಗಳಿಂದು ರಾಜಕೀಯ ಪಕ್ಷಗಳ ಮುಖವಾಣಿಗಳಾಗಿ ಕೆಲಸ ಮಾಡುತ್ತೀವೆ. ಆದರೆ, ಮುಂದಿನ ದಿನಗಳಲ್ಲಾದರೂ, ಸುದ್ದಿ ವಾಹಿನಿಗಳು, ಓರ್ವ ವ್ಯಕ್ತಿ, ಪಕ್ಷದ ಪರವಾಗಿ ನಿಲ್ಲುವುದು ಬಿಟ್ಟು, ಸಮಾಜ ಪರವಾಗಿ ಮಾತನಾಡಬೇಕೆಂದು ತಿಳಿಸಿದರು. ಲೇಖಕ ಎಂ. ವ್ಯೋಮಕೇಶ, ಕಿರುತೆರೆ ನಟ ರೆಹಮಾನ್ ಹಸನ್, ಶೀತಲ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X