Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬರ, ನೀರಿನ ಕೊರತೆ: ಆಹಾರ ಉತ್ಪಾದನೆ ಮೇಲೆ...

ಬರ, ನೀರಿನ ಕೊರತೆ: ಆಹಾರ ಉತ್ಪಾದನೆ ಮೇಲೆ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ22 Oct 2018 7:51 PM IST
share
ಬರ, ನೀರಿನ ಕೊರತೆ: ಆಹಾರ ಉತ್ಪಾದನೆ ಮೇಲೆ ಪರಿಣಾಮ

ಬೆಂಗಳೂರು, ಅ.22: ರಾಜ್ಯದಲ್ಲಿ ಮುಂಗಾರು ಹಂಗಾಮು ಆಶಾದಾಯಕವಾಗಿತ್ತು. ಅದೇ ರೀತಿ ಹಿಂಗಾರು ಉತ್ತಮವಾಗಿರುತ್ತದೆ ಎಂಬ ನಿರೀಕ್ಷೆಯಿದೆ. ಆದರೆ, ಇದರ ಮಧ್ಯೆಯೇ ಆವರಿಸಿರುವ ಬರ ಮತ್ತು ನೀರಿನ ಕೊರತೆ ಈ ಬಾರಿಯೂ ಆಹಾರ ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕ ಕಾಣಿಸಿಕೊಂಡಿದೆ.

2018-19ನೇ ಸಾಲಿನಲ್ಲಿ ಒಟ್ಟಾರೆ 111.64 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 135 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆ ಗುರಿ ಹೊಂದಲಾಗಿದೆ. ಅದರಂತೆ ಮುಂಗಾರು ಹಂಗಾಮಿನಲ್ಲಿ (ಸೆಪ್ಟೆಂಬರ್ ಅಂತ್ಯದವರೆಗೆ) ಒಟ್ಟು ಕೃಷಿ ಬಿತ್ತನೆ ಗುರಿ 74.89 ಲಕ್ಷ ಹೆಕ್ಟೇರ್ ಪೈಕಿ 67.99 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. 2017ರ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಪ್ರಮಾಣ 64.37 ಲಕ್ಷ ಹೆಕ್ಟೇರ್‌ನಷ್ಟಿತ್ತು. ಆದರೆ, ಮುಂಗಾರು ಹಂಗಾಮಿನಲ್ಲಿ ಕೆಲವೆಡೆ ಅತಿವೃಷ್ಟಿ ಮತ್ತು ತೇವಾಂಶ ಕೊರತೆಯಿಂದಾಗಿ 14.68 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದಾಗಿ ಈ ಹಂಗಾಮಿನಲ್ಲಿ ನಿರೀಕ್ಷಿತ 99.71 ಲಕ್ಷ ಟನ್ ಆಹಾರ ಉತ್ಪಾದನೆ ಗುರಿ ಕಷ್ಟಸಾಧ್ಯ ಎಂದು ಕೃಷಿ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ.

ರಾಜ್ಯದ 32.29 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ರಾಗಿ ಮತ್ತಿತರ ಆಹಾರ ಧಾನ್ಯಗಳ ಬಿತ್ತನೆಯಾಗಿದ್ದು, ಇದರಲ್ಲಿ ತೇವಾಂಶ ಕೊರತೆ ಮತ್ತು ಭಾರೀ ಮಳೆಯಿಂದ 4.97 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ಅದೇ ರೀತಿ 14.91 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾದ ದ್ವಿದಳ ಧಾನ್ಯ ಪೈಕಿ 6.18 ಲಕ್ಷ ಹೆಕ್ಟೇರ್ ಹಾಗೂ 9.46 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾದ ಎಣ್ಣೆಕಾಳುಗಳ ಪೈಕಿ 2.67 ಲಕ್ಷ ಹೆಕ್ಟೇರ್ ಬೆಳೆ ತೇವಾಂಶ ಕೊರತೆ ಮತ್ತು ಭಾರೀ ಮಳೆಯಿಂದ ಹಾನಿಗೊಳಗಾಗಿದೆ.

ವಾಣಿಜ್ಯ ಬೆಳೆಗಳಾದ ಹತ್ತಿ, ಕಬ್ಬು ಮತ್ತು ತಂಬಾಕು ಉತ್ಪನ್ನಗಳನ್ನು ಈ ಮುಂಗಾರಿನಲ್ಲಿ 11.28 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುವ ಗುರಿ ಹೊಂದಲಾಗಿದ್ದು, ಗುರಿ ಮೀರಿ 11.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಈ ಪೈಕಿ ಒಣಹವೆ ಮತ್ತು ಮಳೆಯಿಂದಾಗಿ 83,523 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ವಿಶೇಷವೆಂದರೆ ತೇವಾಂಶ ಕೊರತೆ ಮತ್ತು ಮಳೆಯಿಂದ ಹಾನಿಗೊಳಗಾಗಿರುವುದು ಹತ್ತಿ ಬೆಳೆ ಮಾತ್ರ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹಿಂಗಾರು ಹಂಗಾಮಿನಲ್ಲಿ (ಅ.1ರಿಂದ) 31.80 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಪೈಕಿ 15 ದಿನಗಳಲ್ಲಿ ಸುಮಾರು 7.34 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. 2017ರಲ್ಲಿ ಇದೇ ಅವಧಿಗೆ 8.02 ಲಕ್ಷ ಹೆಕ್ಟೇರ್ ಬಿತ್ತನೆಯಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂಗಾರು ಹಂಗಾಮಿನಲ್ಲಿ ಮಳೆ ಬಿದ್ದರೂ ಕೆಲವು ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳಿಗೆ ನೀರಿನ ಸಮಸ್ಯೆ ಎದುರಾಗಿರುವುದು ಮತ್ತು ಸುಮಾರು 100 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿರುವುದು ಕೃಷಿ ಚಟುವಟಿಕೆಗಳ ಆರಂಭ ನಿಧಾನಗತಿಯಾಗಲು ಕಾರಣ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.

ತೋಟಗಾರಿಕಾ ಬೆಳೆಗಳಿಗೂ ಅಪಾಯ: ಬರ ಪರಿಸ್ಥಿತಿ ಮತ್ತು ಸಮಯಕ್ಕೆ ಸರಿಯಾಗಿ ಮಳೆ ಬಾರದಿರುವುದರಿಂದ ತೋಟಗಾರಿಕಾ ಬೆಳೆಗಳೂ ಅಪಾಯ ಎದುರಿಸುವ ಆತಂಕ ಎದುರಾಗಿದೆ. ಈ ಹಿಂದಿನ 5 ವರ್ಷದಲ್ಲಿ ತೋಟಗಾರಿಕಾ ಬೆಳೆ ಪ್ರದೇಶ ಮತ್ತು ಬೆಳೆ ಪ್ರಮಾಣ ಏರುಮುಖವಾಗಿತ್ತು. ಸತತ ಬರದ ನಡುವೆಯೂ ಬೆಳೆ ರೈತರ ಕೈ ಹಿಡಿದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X