ಉಡುಪಿ: ಕುಷ್ಠ ರೋಗ ಪತ್ತೆ ಹಚ್ಚುವ ಆಂದೋಲನ ಉದ್ಘಾಟನೆ

ಉಡುಪಿ, ಅ.22: ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಉಡುಪಿ ಜಿಲ್ಲೆ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಕಚೇರಿ ಉಡುಪಿ ಜಿಲ್ಲೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಇವರ ಸಂಯೋಜನೆಯಲ್ಲಿ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನದ ಉದ್ಘಾಟನಾ ಕಾರ್ಯಕ್ರಮ ಸೋಮವಾರ ಉಡುಪಿಯ ನಗರ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಅ.22ರಿಂದ ನ.4ರವರೆಗೆ ಉಡುಪಿ ಜಿಲ್ಲೆಯಾದ್ಯಂತ ನಡೆಯುವ ಈ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮ ರಾವ್, ಉಡುಪಿ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಕುಷ್ಠರೋಗ ನಿವಾರಣಾ ಅಧಿಕಾರಿ ಡಾ.ಸುರೇಂದ್ರ ಚಿಂಬಾಳ್ಕರ್ ಪಿ.ಇ ಪ್ರಾಸ್ತಾವಿಕ ಮಾತನಾಡಿದರು.
Next Story





