ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ: ಇಬ್ಬರು ಪೊಲೀಸರು ಸೇರಿ ನಾಲ್ವರು ಸಾವು

ಹೈದರಾಬಾದ್,ಅ.22: ರವಿವಾರ ಸಂಜೆ ಇಲ್ಲಿ ಕಾರೊಂದು ಟ್ರ್ಯಾಕ್ಟರ್ ಟ್ರೈಲರ್‌ಗೆ ಢಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿ ರಸ್ತೆಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





