ಬಿಜೆಪಿ ಶಾಸಕರಿಂದ ನೀತಿ ಸಂಹಿತೆ ಉಲ್ಲಂಘನೆ

ಬಾಗಲಕೋಟೆ, ಅ. 23: ಜಿಲ್ಲೆಯ ಜಮಖಂಡಿ ಕ್ಷೇತ್ರದ ಚುನಾವಣಾ ಪ್ರಚಾರದ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ಅವರ ಗಾಯಕಿಯೊಬ್ಬರಿಗೆ ಹಣ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ.
ಮಂಗಳವಾರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಕುಲಕರ್ಣಿ ಪರ ಶಾಸಕ ಎಸ್.ಎ.ರಾಮದಾಸ್ ಮನೆ-ಮನೆ ಪ್ರಚಾರ ಮಾಡುತ್ತಿದ್ದ ವೇಳೆ ಎದೆ ತುಂಬಿ ಹಾಡುವೆನು ಹಾಡಿದ ಗಾಯಕಿ ಶಾಂಭವಿ ಭಾರ್ಗವಿಯ ಮನೆಗೆ ಭೇಟಿ ನೀಡಿದ್ದರು ಎಂದು ತಿಳಿದು ಬಂದಿದೆ.
ಇದೇ ವೇಳೆ ಗಾಯಕಿಗೆ ಶಾಲು ಹೊದಿಸಿ, ನಗದು ಹಣ ನೀಡಿ ಸನ್ಮಾನ ಮಾಡಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಶಾಸಕರು ಹಣ ನೀಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಶಾಂಭವಿ ಭಾರ್ಗವಿ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಭಾಗಿಯಾಗಿ ಖ್ಯಾತಿ ಪಡೆದಿದ್ದರು.
Next Story





