ಯುಜಿ-ಆಯುಷ್ ಕೋರ್ಸುಗಳ ಸೀಟು ಹಂಚಿಕೆ ಫಲಿತಾಂಶ
ಬೆಂಗಳೂರು, ಅ.23: 2018ನೆ ಸಾಲಿನ ಯುಜಿ-ಆಯುಷ್(ಆಯುರ್ವೇದ, ಹೋಮಿಯೋಪತಿ, ನ್ಯಾಚುರೋಪತಿ ಮತ್ತು ಯೋಗ, ಯುನಾನಿ) ಕೋರ್ಸುಗಳ ಪ್ರವೇಶಾತಿಗೆ ಸೀಟು ಹಂಚಿಕೆಯ ಫಲಿತಾಂಶವನ್ನು ಅ.22ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ. ನಿಗದಿತ ಶುಲ್ಕವನ್ನು ಪಾವತಿಸಿ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಕಾಲೇಜಿನಲ್ಲಿ ಪ್ರವೇಶ ಪಡೆಯಲು ಸೂಚಿಸಿದೆ.
ಪಿಜಿ-ಆಯುಷ್ ದಾಖಲಾತಿ ಪರಿಶೀಲನೆ: 2018ನೇ ಸಾಲಿನ ಪಿಜಿ-ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ದಾಖಲಾತಿ ಪರಿಶೀಲನೆಯನ್ನು ಅ.23ರಂದು ಬೆಂಗಳೂರಿನ ರಾಜ್ಯ ಪರೀಕ್ಷಾ ಪ್ರಾಧಿಕಾರದಲ್ಲಿ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಎಲ್ಲ ಮೂಲ ದಾಖಲಾತಿಗಳೊಂದಿಗೆ ಮತ್ತು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸುವಂತೆ ದಾಖಲೆ ಪರಿಶೀಲನೆಗೆ ಹಾಜರಾಗಲು ಸೂಚಿಸಿದೆ. ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಗೆ ಭೇಟಿ ನೀಡಬಹುದಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.





