Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆ ಗುಂಡಿ ಮುಚ್ಚುತ್ತೀರೋ, ಇಲ್ಲ...

ರಸ್ತೆ ಗುಂಡಿ ಮುಚ್ಚುತ್ತೀರೋ, ಇಲ್ಲ ಬಿಬಿಎಂಪಿಯನ್ನೇ ಮುಚ್ಚಬೇಕಾ ?: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 Oct 2018 9:35 PM IST
share
ರಸ್ತೆ ಗುಂಡಿ ಮುಚ್ಚುತ್ತೀರೋ, ಇಲ್ಲ ಬಿಬಿಎಂಪಿಯನ್ನೇ ಮುಚ್ಚಬೇಕಾ ?: ಹೈಕೋರ್ಟ್

ಬೆಂಗಳೂರು, ಅ.23: ರಸ್ತೆ ಗುಂಡಿ ಮುಚ್ಚಲು ನೀಡಿದ ಗಡುವು ಮುಗಿದರೂ ಇನ್ನೂ ಸಂಪೂರ್ಣವಾಗಿ ಗುಂಡಿ ಮುಚ್ಚದ ಕಾರಣ ಹೈಕೋರ್ಟ್ ಬಿಬಿಎಂಪಿ ವಿರುದ್ಧ ಗರಂ ಆಗಿದೆ. ಗುಂಡಿ ಮುಚ್ಚುತ್ತೀರೋ ಅಥವಾ ಬಿಬಿಎಂಪಿಯನ್ನೇ ಮುಚ್ಚಬೇಕೋ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರಿದ್ದ ವಿಭಾಗೀಯ ಪೀಠದಲ್ಲಿ ಮಂಗಳವಾರ ನಡೆದ ಪಿಐಎಲ್ ವಿಚಾರಣೆಯಲ್ಲಿ ಉತ್ತರಿಸಿದ ಬಿಬಿಎಂಪಿ, ಕಳೆದ 15 ದಿನಗಳಿಂದ ರಸ್ತೆಗುಂಡಿ ಮುಚ್ಚಿಲ್ಲ, 43 ಪ್ರದೇಶಗಳ ಪೈಕಿ 16 ಕಡೆ ಮುಚ್ಚಿದ್ದೇವೆಂದು ಹೇಳಿದೆ.

ಈ ಉತ್ತರಕ್ಕೆ ಕೆಂಡಾಮಂಡಲವಾದ ಪೀಠ, ನೀವು ಗುಂಡಿ ಮುಚ್ಚದಿದ್ದರೆ ನಿಮ್ಮದೇ ವೈಫಲ್ಯ ಎಂದು ಪರಿಗಣಿಸಲ್ಪಡುತ್ತದೆ. ನಿಮ್ಮಿಂದಾಗದಿದ್ದರೆ ಈ ಕಾರ್ಯವನ್ನು ಬೇರೆ ಏಜೆನ್ಸಿಗೆ ನೀಡುತ್ತೇವೆ ಎಂದು ಎಚ್ಚರಿಕೆ ನೀಡಿತು. ಅಷ್ಟೇ ಅಲ್ಲ ನಿಷ್ಪ್ರಯೋಜಕವೆಂದು ಸಾಬೀತು ಮಾಡುತ್ತಿದ್ದೀರಾ. ನಿಮ್ಮ ಅಧಿಕಾರಿಗಳಿಗೆ ಎಷ್ಟು ಕೆಲಸವಾಗಿದೆ ಎಂಬ ಬಗ್ಗೆ ಕೂಡ ತಿಳಿದಿರುವುದಿಲ್ಲ. 43 ಪ್ರದೇಶಗಳ ರಸ್ತೆಗುಂಡಿಗಳನ್ನು ಇವತ್ತೇ ಮುಚ್ಚಬೇಕು. ಬಿಡಬ್ಲುಎಸ್‌ಎಸ್‌ಬಿಯೋ, ಬಿಬಿಎಂಪಿ ತಪ್ಪೊ ಗೊತ್ತಿಲ್ಲ ಎಂದಿತು.

ಗುಂಡಿಗಳಿಗೆ ನಾವು ಹೊಣೆಯಲ್ಲವೆಂದು ನೀರು ಪೂರೈಕೆ ಮತ್ತು ಒಳಚರಂಡಿ ಮಂಡಳಿ ವಾದಿಸಿತು. ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಹೈಕೋರ್ಟ್ ನೀಡಿದ್ದ ಗಡುವು ಇಂದು ಮುಗಿದಿದೆ. ಆದಾಗ್ಯೂ, ಬಹುತೇಕ ಕಡೆ ವಾಹನ ಸವಾರರ ಬಲಿಗಾಗಿ ಹೊಂಡ-ಗುಂಡಿಗಳು ಬಾಯ್ತೆರೆದು ಕುಳಿತಿವೆ.

ಸತತವಾಗಿ ಮಳೆ ಸುರಿಯುತ್ತಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಕೂಡ ಮೂರು ಬಾರಿ ಗಡುವು ವಿಸ್ತರಿಸಿತು. ದಸರಾ ರಜೆ ಅವಧಿಯಲ್ಲಿ ನಗರದಲ್ಲಿ ವಾಹನಗಳ ದಟ್ಟಣೆ ಕಡಿಮೆ ಇರುತ್ತದೆ. ಈ ಅವಧಿಯಲ್ಲಿ ತ್ವರಿತವಾಗಿ ಗುಂಡಿ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಆದೇಶಿಸಿತ್ತು.

ಬಹುತೇಕ ರಸ್ತೆಗಳು ಗುಂಡಿ ಮುಕ್ತವಾಗಿಲ್ಲ. ಹೈಕೋರ್ಟ್, ಬಿಬಿಎಂಪಿ ಮತ್ತು ರಾಜ್ಯದ ಶಕ್ತಿಸೌಧಕ್ಕೆ ಹತ್ತಿರವಿರುವ ರಸ್ತೆಗಳಲ್ಲೆ ಗುಂಡಿಗಳನ್ನು ಮುಚ್ಚುವ ಕೆಲಸ ಆಗಿಲ್ಲ. ಈಗಾಗಲೇ ಮುಚ್ಚಿರುವ ಗುಂಡಿಗಳು ಸಹ ಮತ್ತೆ ಬಾಯ್ತೆರೆದುಕೊಂಡಿವೆ. ಕಳಪೆ ಕಾಮಗಾರಿಯಿಂದ ಡಾಂಬರು ಕಿತ್ತು ಬಂದು ಗುಂಡಿಗಳು ನಿರ್ಮಾಣವಾಗಿವೆ. ವಿಚಾರಣೆಯನ್ನು ಅ.26ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X