Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐವರು ಅಧಿಕಾರಿಗಳ ವಿರುದ್ಧ ನ್ಯಾಯಾಂಗ...

ಐವರು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವ ಕ್ರಮ ಕೈಬಿಟ್ಟ ಹೈಕೋರ್ಟ್

ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Oct 2018 9:56 PM IST
share
ಐವರು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವ ಕ್ರಮ ಕೈಬಿಟ್ಟ ಹೈಕೋರ್ಟ್

ಬೆಂಗಳೂರು, ಅ.23: ಸ್ಥಿರಾಸ್ತಿ ವಿಷಯದ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯವೊಂದರಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಹೈಕೋರ್ಟ್ ಆದೇಶವಿದ್ದರೂ ಅದನ್ನು ಲೆಕ್ಕಿಸದೆ ಕಾಂಪೌಂಡ್ ಕೆಡವಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಐವರು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವ ಕ್ರಮವನ್ನು ಹೈಕೋರ್ಟ್ ಕೈ ಬಿಟ್ಟಿದೆ.

ನಾವು ಕೋರ್ಟ್ ಆದೇಶ ಉಲ್ಲಂಘಿಸಿಲ್ಲ ಎಂಬ ಅಧಿಕಾರಿಗಳ ವಿವರಣೆಯುಳ್ಳ ಪ್ರಮಾಣ ಪತ್ರವನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, ಮಂಗಳವಾರ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸಲ್ಲಿಸಿದರು.

ಈ ಪ್ರಮಾಣ ಪತ್ರಗಳನ್ನು ಮಾನ್ಯ ಮಾಡಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣದ ಲೋಕೋಪಯೋಗಿ ಇಲಾಖೆಯ ಎಕ್ಸಿಕ್ಯುಟಿವ್ ಎಂಜಿನಿಯರ್ ಹೇಮಲತಾ, ಸಹಾಯಕ ಎಂಜಿನಿಯರ್‌ಗಳಾದ ರಾಜಣ್ಣ, ಜಯಕುಮಾರ್, ಬಂಗಾರಸ್ವಾಮಿ ಹಾಗೂ ಸಬ್ ಇನ್‌ಸ್ಪೆಕ್ಟರ್ ಚೈತನ್ಯ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಕ್ರಮವನ್ನು ಕೈಬಿಟ್ಟಿತು. ಅಂತೆಯೇ ಇವರೆಲ್ಲಾ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಲ್ಲಿ ತಲಾ 50 ಸಾವಿರ ಠೇವಣಿ ಇರಿಸಬೇಕು ಎಂಬ ಆದೇಶವನ್ನೂ ಹಿಂಪಡೆಯಿತು.

ನಾವು ಅರ್ಜಿದಾರರ ಮನೆಯ ಕಾಂಪೌಂಡ್ ಕೆಡವಿಲ್ಲ. ಬದಲಿಗೆ ಅವರ ಮನೆಯ ಪಕ್ಕದಲ್ಲಿರುವ ಪೆಟ್ರೋಲ್ ಬಂಕ್ ಕಾಂಪೌಂಡ್ ಕೆಡವಲಾಗಿದೆ. ಈ ವೇಳೆ ಇದಕ್ಕೆ ಹೊಂದಿಕೊಂಡ ಅರ್ಜಿದಾರರ ಮನೆಯ ಕಾಂಪೌಂಡ್ ಗೋಡೆಯೂ ಬಿದ್ದು ಹೋಗಿದೆ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿದಾರರ ಮನೆಯ ಕಾಂಪೌಂಡ್ ಕೆಡವಲಾಗಿದೆಯೋ ಇಲ್ಲವೊ ಎಂಬುದನ್ನು ನಾಲ್ಕು ವಾರಗಳಲ್ಲಿ ಪರಿಶೀಲಿಸಿ ರಸ್ತೆ ವಿಸ್ತರಣೆ ಕಾರ್ಯ ಮುಂದುವರಿಸಬಹುದು ಎಂದು ರಾಮನಗರ ಜಿಲ್ಲಾಧಿಕಾರಿಗೆ ನಿರ್ದೇಶಿಸಿತು.

ಈ ಹಿಂದಿನ ವಿಚಾರಣೆ ವೇಳೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಅವರನ್ನೂ ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಪೀಠ, ನಿಮ್ಮೆಲ್ಲರ ವಿರುದ್ಧ ಯಾಕೆ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿತ್ತು.

ನೀವೆಲ್ಲರೂ ನಿಮ್ಮ ನಿಮ್ಮ ಸ್ವಂತ ಖರ್ಚಿನಲ್ಲಿ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು, ಇಚ್ಛಾಪೂರ್ವಕವಾಗಿ ಕೋರ್ಟ್ ಆದೇಶಕ್ಕೆ ಬೆಲೆ ನೀಡದೆ ಹೋಗಿದ್ದೀರಿ. ಈ ದುರ್ವರ್ತನೆ ಆಧಾರದಲ್ಲಿ ನೀವು ಇರಿಸುವ 50 ಸಾವಿರ ಠೇವಣಿ ಮೊತ್ತವನ್ನು ಯಾಕೆ ಮುಟ್ಟುಗೋಲು ಹಾಕಿಕೊಳ್ಳಬಾರದು ಎಂದೂ ಕೇಳಿತ್ತು.

ಪ್ರಕರಣವೇನು: ಚನ್ನಪಟ್ಟಣದ ಕುವೆಂಪುನಗರದ ಮೊದಲನೇ ಕ್ರಾಸ್‌ನಲ್ಲಿರುವ ಜಿ.ಎಂ.ನಂದಿನಿ ಅವರ ಮನೆಯ ಕಾಂಪೌಂಡ್‌ಗೆ ಅಂಟಿಕೊಂಡ ಪೆಟ್ರೋಲ್ ಬಂಕ್ ಗೋಡೆಯನ್ನು ರಸ್ತೆ ಅಗಲೀಕರಣದ ಉದ್ದೇಶಕ್ಕಾಗಿ ಅಧಿಕಾರಿಗಳು ಕೆಡವಿದ್ದರು. ಈ ಸಂಬಂಧ ನಂದಿನಿ ಮತ್ತು ಅವರ ಇಬ್ಬರು ಮಕ್ಕಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಕಳೆದ ತಿಂಗಳ 5ರಂದು, ಗೋಡೆ ಕೆಡವಬಾರದು. ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು ಎಂದು ಆದೇಶಿಸಿತ್ತು.

ಈ ಆದೇಶದ ನಂತರ ಚನ್ನಪಟ್ಟಣ ನಗರಸಭೆ ಆಯುಕ್ತ ಸಿ.ಪುಟ್ಟಸ್ವಾಮಿ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ತಂಡವು ರಸ್ತೆ ಅಗಲೀಕರಣದ ನೆಪದಲ್ಲಿ ನಮ್ಮ ಮನೆಯ ಕಾಂಪೌಂಡ್ ಕೆಡವಿದೆ ಎಂದು ಹೈಕೋರ್ಟ್‌ಗೆ ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X