Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮರಳು ಸಮಸ್ಯೆ: ನಿಯಮ ತಿದ್ದುಪಡಿಗೆ...

​ಮರಳು ಸಮಸ್ಯೆ: ನಿಯಮ ತಿದ್ದುಪಡಿಗೆ ಉಡುಪಿ ಡಿಸಿಯಿಂದ ಸರಕಾರಕ್ಕೆ ಪತ್ರ

ವಾರ್ತಾಭಾರತಿವಾರ್ತಾಭಾರತಿ24 Oct 2018 9:52 PM IST
share

ಉಡುಪಿ, ಅ. 24: ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅವಕಾಶ ಸಿಗದೇ ಉಡುಪಿ ಜಿಲ್ಲಾ ಲಾರಿ ಮಾಲಕರ ಸಂಘ ಸೋಮವಾರ ನಡೆಸಿದ ಧರಣಿ, ಪ್ರತಿಭಟನೆಯ ವೇಳೆ ಸಲ್ಲಿಸಿದ ಮನವಿ ಪತ್ರದಲ್ಲಿರುವ ಬೇಡಿಕೆಗಳನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಈಗಿರುವ ಕೆಲವು ನಿಯಮಾವಳಿಗಳಿಗೆ ತಿದ್ದುಪಡಿ ಮಾಡುವಂತೆ ಕೋರಿ ಸರಕಾರಕ್ಕೆ ಪತ್ರವನ್ನು ಬರೆದಿರುವುದಾಗಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆಗಳಿಗೆ ಹೇಳಿಕೆಯೊಂದನ್ನು ಬಿಡುಗಡೆಗೊಳಿಸಿರುವ ಜಿಲ್ಲಾಧಿಕಾರಿ, ಈಗಾಗಲೇ ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಿರುವ 7 ಮರಳು ದಿಬ್ಬಗಳಿಂದ ಕೇವಲ 17,526 ಮೆಟ್ರಿಕ್ ಟನ್ ಮರಳು ಮಾತ್ರ ಲಭ್ಯವಿದ್ದು, ಇದನ್ನು ಸಾಗಾಟ ಮಾಡಿದಲ್ಲಿ ಸಾರ್ವಜನಿಕರು ದುಬಾರಿ ಬೆಲೆ ಕೊಟ್ಟು ಮರಳು ಖರೀದಿಸಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆದುದರಿಂದ ಸಿಆರ್‌ಝಡ್ ಹಾಗೂ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ ಹೊಸದಾಗಿ ಮರಳು ದಿಬ್ಬ, ಬ್ಲಾಕ್‌ಗಳನ್ನು ಗುರುತಿಸಿ, ಇವುಗಳಿಗೆ ಒಟ್ಟಿಗೆ ಅನುಮೋದನೆ ಪಡೆದು ಒಂದೇ ಬಾರಿ ಸಾರ್ವಜನಿಕರಿಗೆ ಮರಳು ದೊರೆಯುವಂತೆ ಮಾಡಬೇಕು ಎಂದೂ ಲಾರಿ ಮಾಲಕರ ಸಂಘ ಕೋರಿದೆ ಎಂದು ತಿಳಿಸಿದ್ದಾರೆ.

ಇದಕ್ಕಾಗಿ ಮರಳು ಬ್ಲಾಕ್‌ಗಳನ್ನು ಗುರುತಿಸಿ ಅನುಮೋದನೆ ಪಡೆಯಲು ಕನಿಷ್ಠ 30 ದಿನಗಳ ಕಾಲಾವಕಾಶ ಬೇಕೆಂದು ತಿಳಿಸಲಾಗಿದೆ. ಸಂಘದ ಇನ್ನೊಂದು ಬೇಡಿಕೆಯಂತೆ ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ಮರಳು ಸಾಗಾಟ ಪರವಾನಿಗೆ ನೀಡುವ ಕುರಿತು ಈಗಾಗಲೇ ದ.ಕ. ಜಿಲ್ಲೆಯ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆಯಲಾಗಿದೆ ಎಂದಿದ್ದಾರೆ.

ಉಡುಪಿ ಜಿಲ್ಲೆಯ ನಾನ್‌ಸಿಆರ್‌ಝಡ್ ನದಿ ಪಾತ್ರಗಳಲ್ಲಿ ಮರಳು ಬ್ಲಾಕ್‌ಗಳನ್ನು ನಿಯಮಾವಳಿಯಂತೆ ಗುರುತಿಸಲು ಸಾಧ್ಯವಾಗದಿರುವುದರಿಂದ ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಮರಳು ಬ್ಲಾಕ್‌ಗಳನ್ನು ಗುರುತಿಸಲು ನಿಯಮಾವಳಿಯಲ್ಲಿ ತಿದ್ದುಪಡಿ ಮಾಡುವ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗಿದೆ.
ಇನ್ನು ಕುಂದಾಪುರ ಮತ್ತು ಬೈಂದೂರು ತಾಲೂಕಿನ ಕರಾವಳಿ ನಿಯಂತ್ರಣ ವಲಯ ಪ್ರದೇಶದ ನದಿ ಪಾತ್ರಗಳು ಜೈವಿಕ ಸೂಕ್ಷ್ಮ ಪ್ರದೇಶಗಳಲ್ಲಿ ಬರುವುದರಿಂದ ಇದರ ಮಿತಿಯನ್ನು ಕಡಿಮೆಗಳಿಸುವಂತೆ ಸಲ್ಲಿಸಿರುವ ಮನವಿಗೆ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸಿಆರ್‌ಝಡ್ ಪ್ರದೇಶದ ನದಿ ಪಾತ್ರಗಳಲ್ಲಿ ಬರುವ ಜೈವಿಕ ಸೂಕ್ಷ್ಮ ಪ್ರದೇಶಗಳ ಮಿತಿಯನ್ನು ಕಡಿಮೆಗೊಳಿಸಿ ತಿದ್ದುಪಡಿ ತರುವ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಪ್ರಿಯಾಂಕ ತಿಳಿಸಿದ್ದಾರೆ.

ತಾಲೂಕು ಕೇಂದ್ರ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಟೆಂಡರ್ ಪ್ರಕ್ರಿಯೆ ಕೈಬಿಟ್ಟು ಐದು ವರ್ಷಗಳ ಹಿಂದೆ ನೀಡಲಾಗುತಿದ್ದಂತೆ ಪರವಾನಿಗೆಯನ್ನು ಸ್ಥಳೀಯ ಪಂಚಾಯತ್ ವ್ಯಾಪ್ತಿಯಲ್ಲೇ ನೀಡಿ, ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲು ಹಾಗೂ ಒಂದು ವೇಳೆ ಟೆಂಡರ್ ಮಾಡುವುದಾದರೆ ಐದು ವರ್ಷಗಳ ಪರವಾನಿಗೆ ಪಡೆದವರು ಒಂದು ಗ್ರಾಪಂನಲ್ಲಿ ಇಲ್ಲದಿದ್ದಲ್ಲಿ ಅದೇ ಗ್ರಾಪಂನಲ್ಲಿ ವಾಸ ಮಾಡುವ ಹೊಸಬರಿಗೆ ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ನೀಡಬೇಕೆಂಬ ಬೇಡಿಕೆಗೆ ಅನುಗುಣವಾಗಿ ಕೆಎಂಎಂಸಿಆರ್ 1994ರ ತಿದ್ದುಪಡಿ ಅಧಿನಿಯಮ 2017ರ 31ಝಡ್‌ಬಿ-ಎರಲ್ಲಿ ತಿದ್ದುಪಡಿ ತರಲು ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X