ಬೆಂಗಳೂರು: ಶೆಡ್‌ನಲ್ಲಿ ಮಲಗಿದ್ದ ಮಹಿಳೆಗೆ ಚಾಕು ಇರಿತ

ಬೆಂಗಳೂರು, ಅ.24: ಶೆಡ್‌ನಲ್ಲಿ ಮಲಗಿದ್ದ ಮಹಿಳಾ ಕಾರ್ಮಿಕರೊಬ್ಬರ ಕುತ್ತಿಗೆಗೆ ಅಪರಿಚಿತನೊಬ್ಬ ಚಾಕುವಿನಿಂದ ಇರಿದು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಎಚ್‌ಎಸ್‌ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲಕ ಕಲಮ್ಮ (40) ಚಾಕು ಇರಿತಕ್ಕೆ ಒಳಗಾದ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಎಚ್‌ಎಸ್‌ಆರ್ ಲೇಔಟ್‌ನ 2ನೆ ಸೆಕ್ಟರ್ 17ನೆ ಕ್ರಾಸ್‌ನ ಕೆಇಬಿ ಕಚೇರಿ ಬಳಿ ಕಟ್ಟಡವೊಂದು ನಿರ್ಮಾಣಗೊಳ್ಳುತ್ತಿದ್ದು, ಇಲ್ಲಿ ಕಲಮ್ಮ ಕೆಲಸ ಮಾಡುತ್ತಿದ್ದಾರೆ. ಸಮೀಪದಲ್ಲೇ ಶೆಡ್ ಒಂದರಲ್ಲಿ ನೆಲೆಸಿರುವ ಅವರು ಕಳೆದ ರಾತ್ರಿ ಅಲ್ಲಿ ಮಲಗಿದ್ದಾರೆ. ಒಳನುಗ್ಗಿರುವ ಅಪರಿಚಿತ ವ್ಯಕ್ತಿಯೊಬ್ಬ ಕಲಮ್ಮ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಇತರ ಕಾರ್ಮಿಕರು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಆರೋಪಿಯ ಪತ್ತೆಗೆ ಬಲೆಬೀಸಿದ್ದಾರೆ.





