ಹನೂರು: ವಾಲ್ಮಿಕಿ ಜಯಂತಿ ಆಚರಣೆ

ಹನೂರು,ಅ.24: ಆಧಿಕವಿ ಮಹರ್ಷಿ ವಾಲ್ಮಿಕಿ ಜಯಂತಿಯನ್ನು ಬುಧವಾರ ಹನೂರಿನ ಪಟ್ಟಣ ಪಂ. ಯಲ್ಲಿ ಆಚರಿಸಲಾಯಿತು.
ವಾಲ್ಮಿಕಿ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ ಬಳಿಕ ಮಾತನಾಡಿದ ಪಪಂ ಮುಖ್ಯಾಧಿಕಾರಿ ಎಸ್.ಡಿ ಮೋಹನ್‍ಕೃಷ್ಣ, ರಾಮಾಯಣವು ಭಾರತೀಯರ ಜೀವನ ಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮಿಕಿಯು ರಾಮಾಯಣದಲ್ಲಿ ಭರತ ಖಂಡದಲ್ಲಿನ ಅರಣ್ಯಗಳು ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ. ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ ಎಂದರು.
ಈ ಸಂದರ್ಭ ಪಪಂ ಅಧ್ಯಕ್ಷೆ ಮಮತಾಮಹದೇವ, ಉಪಾಧ್ಯಕ್ಷ ಬಸವರಾಜು, ಮಾಜಿ ಅಧ್ಯಕ್ಷ ರಾಜುಗೌಡ ಹಾಗೂ ಸದಸ್ಯರು, ಮುಖಂಡ ಮಹೇಶ್ ಸೇರಿದಂತೆ ಕಚೇರಿ ಸಿಬ್ಬಂದಿಗಳು ಹಾಜರಿದ್ದರು.
Next Story





