Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ಮಕ್ಕಳನ್ನು ಹೊಂದಿದರೆ ಪಂಚಾಯತ್...

ಮೂರು ಮಕ್ಕಳನ್ನು ಹೊಂದಿದರೆ ಪಂಚಾಯತ್ ಸ್ಪರ್ಧೆಗೆ ಅನರ್ಹ: ಸುಪ್ರೀಂ

ವಾರ್ತಾಭಾರತಿವಾರ್ತಾಭಾರತಿ25 Oct 2018 9:12 AM IST
share
ಮೂರು ಮಕ್ಕಳನ್ನು ಹೊಂದಿದರೆ ಪಂಚಾಯತ್ ಸ್ಪರ್ಧೆಗೆ ಅನರ್ಹ: ಸುಪ್ರೀಂ

ಹೊಸದಿಲ್ಲಿ, ಅ. 25: ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗುತ್ತಾನೆ. ಅಂಥ ವ್ಯಕ್ತಿಗಳು ಪಂಚಾಯತ್ ಸದಸ್ಯ ಅಥವಾ ಸರಪಂಚ ಹುದ್ದೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಎರಡು ಮಕ್ಕಳ ನೀತಿಗೆ ಬದ್ಧವಾಗುವ ಸಲುವಾಗಿ ಮೂರನೇ ಮಗುವನ್ನು ದತ್ತು ನೀಡಿ ಪಂಚಾಯತ್ ಸರಪಂಚ ಹುದ್ದೆ ಉಳಿಸಿಕೊಳ್ಳುವ ಸುಪ್ರೀಂಕೋರ್ಟ್ ಕಟ್ಟೆ ಏರಿದ ಒಡಿಶಾದ ಬುಡಕಟ್ಟು ಜನಾಂಗದ ಸರಪಂಚರೊಬ್ಬರ ವಾದವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಹಾಗೂ ಕೆ.ಎಂ.ಜೋಸೆಫ್ ಅವರನ್ನು ಒಳಗೊಂಡ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

ಪಂಚಾಯತ್‌ರಾಜ್ ಕಾಯ್ದೆಯಡಿ ಮೂರು ಜೀವಂತ ಮಕ್ಕಳನ್ನು ಹೊಂದಿದ ಪುರುಷ/ ಮಹಿಳೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವುದನ್ನು ಹಾಗೂ ಪಂಚಾಯತ್ ನಲ್ಲಿ ಯಾವುದೇ ಹುದ್ದೆ ಹೊಂದುವುದನ್ನು ನಿಷೇಧಿಸಿದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

ಈ ನಿಯಮಾವಳಿಯ ಉದ್ದೇಶ ಕುಟುಂಬದಲ್ಲಿ ಮಕ್ಕಳು ಹುಟ್ಟುವುದನ್ನು ನಿರ್ಬಂಧಿಸುವುದೇ ವಿನಃ, ಹೆಚ್ಚುವರಿ ಮಕ್ಕಳನ್ನು ದತ್ತು ನೀಡುವ ಮೂಲಕ ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆಯಡಿ ಲಭ್ಯವಿರುವ ಅವಕಾಶವನ್ನು ದುರುಪಯೋಗಪಡಿಸುವ ಸಲುವಾಗಿ ಅಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಅರ್ಜಿದಾರರಾದ ಮೀನಾಸಿಂಗ್ ಮಾಜ್ಹಿಯವರು, ನೌಪಾದಾ ಜಿಲ್ಲೆಯ ಪಂಚಾಯತ್ ಸರಪಂಚ ಹುದ್ದೆಯಿಂದ ತಮ್ಮನ್ನು ಅನರ್ಹಗೊಳಿಸಿದ ಒಡಿಶಾ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಪತ್ನಿ 1995 ಹಾಗೂ 1998ರಲ್ಲಿ ಇಬ್ಬರು ಮಕ್ಕಳಿಗೆ ಜನ್ಮ ನೀಡಿದ್ದರು. 2002ರ ಫೆಬ್ರವರಿಯಲ್ಲಿ ಅವರು ಸರಪಂಚರಾಗಿ ಆಯ್ಕೆಯಾಗಿದ್ದರು. 2002ರ ಆಗಸ್ಟ್‌ನಲ್ಲಿ ಮೂರನೇ ಮಗು ಹುಟ್ಟಿದ ಹಿನ್ನೆಲೆಯಲ್ಲಿ ಅವರನ್ನು ಹುದ್ದೆಯಿಂದ ಅನರ್ಹಗೊಳಿಸಲಾಗಿತ್ತು.

ಮೊದಲ ಮಗುವನ್ನು ಮಾಜ್ಹಿ 1999ರ ಸೆಪ್ಟೆಂಬರ್‌ನಲ್ಲಿ ದತ್ತು ನೀಡಿದ್ದ ಹಿನ್ನೆಲೆಯಲ್ಲಿ ಅವರ ಅನರ್ಹತೆ ಸಿಂಧುವಲ್ಲ ಎಂದು ವಕೀಲ ಪುನೀತ್ ಜೈನ್ ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X