ಜಿಲ್ಲಾಮಟ್ಟದ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 70 ಪದಕ

ಮೂಡುಬಿದಿರೆ, ಅ. 25: ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಆಳ್ವಾಸ್ ಶಾಲೆ ಮೂಡುಬಿದಿರೆ 32 ಚಿನ್ನ, 26 ಬೆಳ್ಳಿ ಪದಕಗಳನ್ನು, 12 ಕಂಚಿನ ಪದಕ ಒಟ್ಟು 70 ಪದಕಗಳನ್ನು ಪಡೆದು 8 ನೂತನ ಕೂಟ ದಾಖಲೆಯೊಂದಿಗೆ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ವೈಯಕ್ತಿಕ ಪ್ರಶಸ್ತಿ: 17 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ರಿನ್ಸ್ ಜೋಸೆಫ್, 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ದೀಪಶ್ರೀ ಪ್ರಶಸ್ತಿ, ಪ್ರೌಢಶಾಲಾ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ರಿಯೋನ್, ಪ್ರಾಥಮಿಕ ಶಾಲಾ 14 ವರ್ಷ ವಯೋಮಿತಿಯ ಬಾಲಕರ ವಿಭಾಗ ದಲ್ಲಿ ಸುಜಲ್ ಗಜಾನನ ನಾಯಕ್ ಪ್ರಶಸ್ತಿಯನ್ನು ಪಡೆದಿದ್ದಾರೆ.
ತಂಡ ಪ್ರಶಸ್ತಿ: 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ತಂಡ ಪ್ರಶಸ್ತಿ ಹಾಗೂ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
Next Story





