Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಮೆಟ್ರೋ-ಬಿಎಂಟಿಸಿ’ ಕಾಮನ್ ಫೇರ್‌...

‘ಮೆಟ್ರೋ-ಬಿಎಂಟಿಸಿ’ ಕಾಮನ್ ಫೇರ್‌ ಕಾರ್ಡ್ ಪರಿಚಯಿಸಲು ಚಿಂತನೆ: ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ26 Oct 2018 7:45 PM IST
share
‘ಮೆಟ್ರೋ-ಬಿಎಂಟಿಸಿ’ ಕಾಮನ್ ಫೇರ್‌ ಕಾರ್ಡ್ ಪರಿಚಯಿಸಲು ಚಿಂತನೆ: ಪರಮೇಶ್ವರ್

ಬೆಂಗಳೂರು, ಅ. 26: ಮೆಟ್ರೋ ಹಾಗೂ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸಲು ಕಾಮನ್ ಫೇರ್‌ ಕಾರ್ಡ್ ಪರಿಚಯಿಸಲು ಚಿಂತಿಸಿದ್ದು, ಉಪಚುನಾವಣೆ ಬಳಿಕ ಈ ಕುರಿತು ಕ್ರಮಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಶುಕ್ರವಾರ ಇಲ್ಲಿನ ಶಾಂತಿನಗರದಲ್ಲಿ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರತಿನಿತ್ಯ ಮೆಟ್ರೋದಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ದು, ಆರು ಬೋಗಿಯನ್ನು ಹಂತ-ಹಂತವಾಗಿ ಮಾಡುವುದರಿಂದ ಈ ಸಂಖ್ಯೆ ದ್ವಿಗುಣವಾಗಲಿದೆ ಎಂದರು.

ಬಿಎಂಟಿಸಿ ಹಾಗೂ ಮೆಟ್ರೋ ರೈಲಿನಲ್ಲಿ ಸಂಚರಿಸಲು ಒಂದೇ ಕಾರ್ಡ್ ಪರಿಚಯಿಸಿದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ಸಂಬಂಧ ಚರ್ಚೆ ಮಾಡಿ ಶೀಘ್ರದಲ್ಲೆ ಅಂತಿಮ ನಿರ್ಧಾರ ಮಾಡಲಾಗುವುದು ಎಂದು ಪರಮೇಶ್ವರ್ ಇದೇ ವೇಳೆ ತಿಳಿಸಿದರು.

ಬಿಎಂಟಿಸಿ, ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಎಂಆರ್‌ಡಿಎ, ಮೆಟ್ರೋ ಎಲ್ಲ ಮೆಟ್ರೋ ಪಾಲಿಟಿಕ್ ನಿಗಮಗಳ ಸಮನ್ವಯತೆ ಕಾಪಾಡಲು ಚಿಂತಿಸಲಾಗಿದೆ ಎಂದ ಅವರು, ಮೆಟ್ರೋ ನಿಗಮದಿಂದ ತಿಂಗಳಿಗೆ 30 ಕೋಟಿ ರೂ.ಆದಾಯ ಬರುತ್ತಿದ್ದು, 24 ಕೋಟಿ ರೂ.ವೆಚ್ಚವಾಗುತ್ತಿದೆ. ಭದ್ರತಾ, ಟಿಕೆಟ್ ವಿತರಕರು ಸೇರಿದಂತೆ ಅನಗತ್ಯ ಮಾನವಸಂಪನ್ಮೂಲ ಬಳಕೆಗೆ ಕಡಿವಾಣ ಹಾಕಿ, ತಿಂಗಳಿಗೆ ಕನಿಷ್ಠ 5 ಕೋಟಿ ರೂ.ಗಳಷ್ಟು ವೆಚ್ಚ ಕಡಿಮೆ ಮಾಡಲು ಸೂಚಿಸಿದ್ದೇನೆ ಎಂದ ಅವರು, ಮೆಟ್ರೋ ಎರಡನೆ ಹಂತ 2020ರ ವೇಳೆಗೆ ಮೈಸೂರು ರಸ್ತೆ, ತುಮಕೂರು ರಸ್ತೆ ಸಂಪೂರ್ಣವಾಗಲಿದೆ ಎಂದರು.

ವೈಟ್‌ಫೀಲ್ಡ್, ಆರ್‌ವಿ ರಸ್ತೆ, ಬಿಮ್ಮಸಂದ್ರ ಮಾರ್ಗವು 2021ಕ್ಕೆ ಪೂರ್ಣಗೊಂಡರೆ, ಗೊಟ್ಟಿಗೆರೆ, ನಾಗವಾರ ಮಾರ್ಗ 2023ಕ್ಕೆ ಮುಗಿಯಲಿದೆ. ಈ ಹಂತಕ್ಕೆ 26,405 ಕೋಟಿ ರೂ. ವೆಚ್ಚವಾಗಲಿದೆ. ಆದರೆ ಪೂರ್ಣಗೊಳ್ಳುವ ಒಳಗಾಗಿ 32 ಸಾವಿರ ಕೋಟಿ ರೂ.ಗೆ ತಲುಪಬಹುದು ಎಂದು ಪರಮೇಶ್ವರ್ ತಿಳಿಸಿದರು.

ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ನಿರ್ಮಾಣದ ವಿಚಾರ ಇನ್ನು 15 ದಿನದೊಳಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಸ್ಪಷ್ಟಣೆ ನೀಡಿದರು.

‘ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದಿರುವ ಪ್ರತಿ ಕ್ರೀಡಾಪಟುವಿಗೂ ಕ್ರೀಡಾ ಇಲಾಖೆ ಸಾಮಾನ್ಯವಾಗಿ ಗೌರವ ಮೊತ್ತವನ್ನು ನೀಡಲಿದೆ. ಆದರೆ, ಅಂತರ್‌ರಾಷ್ಟ್ರೀಯ ಕ್ರೀಡಾಪಟು ವಿಶ್ವನಾಥ್ ಗಾಣಿಗ ಅವರಿಗೆ ಗೌರವ ಮೊತ್ತ ನೀಡಿಲ್ಲವೆಂದರೆ ಅವರಿಗೆ ಕೂಡಲೇ ನೀಡಲು ಸೂಚನೆ ನೀಡುತ್ತೇನೆ’

-ಡಾ.ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X