Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಲುವರಾಯಸ್ವಾಮಿ ಬೆಂಬಲಿಗರು ಬಿಜೆಪಿ...

ಚಲುವರಾಯಸ್ವಾಮಿ ಬೆಂಬಲಿಗರು ಬಿಜೆಪಿ ಬೆಂಬಲಿಸಿ: ಯಡಿಯೂರಪ್ಪ

ಮಂಡ್ಯ ಉಪಚುನಾವಣೆ: ಬಿಜೆಪಿ ಬಹಿರಂಗ ಸಭೆ

ವಾರ್ತಾಭಾರತಿವಾರ್ತಾಭಾರತಿ26 Oct 2018 10:53 PM IST
share
ಚಲುವರಾಯಸ್ವಾಮಿ ಬೆಂಬಲಿಗರು ಬಿಜೆಪಿ ಬೆಂಬಲಿಸಿ: ಯಡಿಯೂರಪ್ಪ

ನಾಗಮಂಗಲ, ಅ.26: ಸಿದ್ದರಾಮಯ್ಯನವರ ಆಪ್ತ ಬೆಂಬಲಿಗರು ಹಾಗೂ ಮಂಡ್ಯ ಜಿಲ್ಲೆಯ ಪ್ರಬಲ ಕಾಂಗ್ರೆಸ್ ನಾಯಕರು ಆದ ಎನ್.ಚಲುವರಾಯಸ್ವಾಮಿ ರಾಜಕೀಯ ಭವಿಷ್ಯಕ್ಕಾಗಿ ಅವರ ಬೆಂಬಲಿಗರು ಹಿತೈಷಿಗಳು ಬಿಜೆಪಿಗೆ ಮತಹಾಕುವಂತೆ ವಿನಂತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪಟ್ಟಣದಲ್ಲಿ ನಡೆದ ಮಂಡ್ಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಚಲುವರಾಯಸ್ವಾಮಿ ಬೆಂಬಲಿಗರು ಎದುರಾಳಿ ಜೆಡಿಎಸ್‍ಗೆ ಮತಹಾಕಲು ಸಾದ್ಯವಿಲ್ಲ. ಚಲುವರಾಯಸ್ವಾಮಿಯನ್ನು ಬಹಳ ಹಗುರವಾಗಿ ಮತ್ತು ಕೆಟ್ಟದಾಗಿ ತೆಗಳಿದ್ದಾರೆ. ಅಪಮಾನ ಮಾಡಿದಾರೆ. ಹಾಗಾಗಿ ಅವರ ಅಭಿಮಾನಿಗಳು ಜೆಡಿಎಸ್‍ಗೆ ಮತಹಾಕಬೇಡಿ. ನೀವು ಬಿಜೆಪಿಗೆ ಮತಹಾಕುವುದದರಿಂದ ಅವರಿಗಾದ ಅಪಮಾನಕ್ಕೆ ತಕ್ಕಪಾಠಕಲಿಸಿದಂತಾಗುತ್ತದೆ ಎಂದರು.

ಮಂಡ್ಯ ಮತದಾರರಿಂದ ಅಚ್ಚರಿ ಫಲಿತಾಂಶ: ಸಭೆಯ ಮಾತಿನುದ್ದಕ್ಕೂ ಕಾಂಗ್ರೆಸ್‍ನ ಚಲುವರಾಯಸ್ವಾಮಿಯನ್ನೆ ಜಪಿಸಿದ ಯಡಿಯೂರಪ್ಪ, ಮಂಡ್ಯದಲ್ಲಿ ಇದುವರೆಗೂ ಯಾವುದೇ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿಲ್ಲವಲ್ಲ ಎಂಬ ನೋವಿದೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ ವಿರೋಧಿ ಅಲೆಯಿದೆ. ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಎಲ್ಲ ರೀತಿಯಲ್ಲೂ ಸಮರ್ಥರಿದ್ದಾರೆ. ಮಂಡ್ಯ ಜಿಲ್ಲೆ ಮತದಾರರು ಈ ಬಾರಿ ಬಿಜೆಪಿ ಪರ ಅಚ್ಚರಿಯ ಫಲಿತಾಂಶ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಹುಲ್‍ಗಾಂಧಿ ಪ್ರಧಾನಮಂತ್ರಿ ಅಭ್ಯರ್ಥಿಯಲ್ಲ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದ್ದಾರೆ. ಇನ್ನು ಬಿಎಸ್‍ಪಿ ವರಿಷ್ಠೆ ಮಾಯಾವತಿ ಕೂಡ ಕಾಂಗ್ರೆಸ್‍ನಿಂದ ದೂರವೇ ಉಳಿದಿದ್ದಾರೆ. ರಾಜ್ಯದಲ್ಲಿನ ಮೈತ್ರಿ ಸರಕಾರ ರೈತರ ಎಲ್ಲಾ ಸಾಲಮನ್ನಾ ಮಾಡಿದ್ದೇವೆ ಎಂದು ಹೇಳಿದ್ದು ಯಾವ ರೈತರ ಸಾಲಮನ್ನಾವಾಗಿಲ್ಲ. ಹಣಬಲದ ಮೇಲೆ ಜಾತಿ ವಿಷ ಬೀಜ ಬಿತ್ತುವ ಪಕ್ಷ ನಮ್ಮದಲ್ಲ. ನಾನು ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ  ಯೋಜನೆಯನ್ನು ಮೈತ್ರಿ ಸರಕಾರ ಕಡೆಗಣಿಸಿದೆ ಎಂದು ಅವರು ಟೀಕಿಸಿದರು.

ಜೆಡಿಎಸ್ ಗೋಸುಂಬೆ ಇದ್ದಂತೆ:ಸಿ.ಟಿ.ರವಿ 

ಸಭೆಯಲ್ಲಿ ಮಾತನಾಡಿದ ಶಾಸಕ ಸಿ.ಟಿ.ರವಿ ಜೆಡಿಎಸ್ ಪಕ್ಷ ಗೊಸುಂಬೆ ರೀತಿಯಲ್ಲಿ ಬಣ್ಣ ಬದಲಾಯಿಸುತ್ತೆ. ಮೋದಿ ಪ್ರಧಾನಿಯಾದರೆ ದೇಶವನ್ನೇ ಬಿಟ್ಟು ಹೋಗ್ತಿನಿ ಎಂದು ಹೇಳಿ, ಅತಿ ಹೆಚ್ಚು ಭಾರಿ ಮೋದಿಯನ್ನು ಭೇಟಿ ಮಾಡಿದವರು ದೇವೇಗೌಡರೇ ಆಗಿದ್ದಾರೆ. ಅಲ್ಲದೆ ಈಗ ದಕ್ಷಿಣದಲ್ಲಿ ಬಿಜೆಪಿಗೆ ಬಾಗಿಲು ಬಂದ್ ಮಾಡುತ್ತೇನೆ ಎಂದು ಹೇಳಿರುವ ದೇವೇಗೌಡರು ದಕ್ಷಿಣ ಭಾರತದ ಜನರನ್ನು ಗುತ್ತಿಗೆ ಪಡೆದಿದ್ದಾರಾ ಎಂದರು.

ಕಾಂಗ್ರೆಸ್ ನಾಯಕನಿಗೆ ಜೈಕಾರ: ಬಿಜೆಪಿ ಚುನಾವಣಾ ಪ್ರಚಾರ ಸಭೆಗೆ ಕಾಂಗ್ರೇಸ್ ನಾಯಕ ಚಲುವರಾಯಸ್ವಾಮಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿದ್ದರು ಎನ್ನಲಾಗಿದ್ದು, ಯಡಿಯೂರಪ್ಪನವರು ಮಾತು ಮಾತಿಗೂ ಚಲುವರಾಯಸ್ವಾಮಿಯನ್ನೇ ಜಪಿಸುತ್ತಿದ್ದರಿಂದ ಸಭೆಯಲ್ಲಿ ಜೋರು ಚಪ್ಪಾಳೆ, ಸಿಳ್ಳೆ, ಜೈಕಾರಗಳು ಮೊಳಗಿದ್ದು ವಿಶೇಷವಾಗಿತ್ತು.

ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ, ಮಾಜಿ ಡಿಸಿಎಂ ಆರ್.ಅಶೋಕ್, ಮಾಜಿ ಶಾಸಕ ಸುರೇಶ್‍ಗೌಡ, ನಟಿ ತಾರಾ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ತೊಳಲಿ ಕೃಷ್ಣಮೂರ್ತಿ, ವಿಷ್ಣುಮೂರ್ತಿ ಭಟ್, ಇತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X