ಪ್ರತಿಭಟನೆ...
ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಅವರ ಅಧಿಕಾರಗಳನ್ನು ಕಿತ್ತುಕೊಂಡಿರುವ ಸರಕಾರದ ಕ್ರಮವನ್ನು ವಿರೋಧಿಸಿ ಶುಕ್ರವಾರ ಇಲ್ಲಿಯ ಸಿಬಿಐ ಕೇಂದ್ರಕಚೇರಿಯೆದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪೊಲೀಸರು ಬಂಧಿಸಿದರು. ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು. ಅಶೋಕ್ ಗೆಹ್ಲೋಟ್, ಅಹ್ಮದ್ ಪಟೇಲ್, ಮೋತಿಲಾಲ ವೋರಾ, ವೀರಪ್ಪ ಮೊಯ್ಲಿ ಮತ್ತು ಆನಂದ ಶರ್ಮಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು. ಲೋಕತಾಂತ್ರಿಕ ಜನತಾದಳ ನಾಯಕ ಶರದ್ ಯಾದವ್, ಸಿಪಿಐ ನಾಯಕ ಡಿ.ರಾಜಾ ಮತ್ತು ಟಿಎಂಸಿಯ ನದೀಮುಲ್ ಹಕ್ ಅವರೂ ಪ್ರತಿಭಟನೆಯಲ್ಲಿ ಸೇರಿದ್ದರು.
Next Story





