Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ನಮ್ಮ ಮನೋಭಾವ, ಯೋಚನೆಗಳು ಯಶಸ್ಸಿನ...

‘ನಮ್ಮ ಮನೋಭಾವ, ಯೋಚನೆಗಳು ಯಶಸ್ಸಿನ ಉತ್ತುಂಗಕ್ಕೇರಿಸುತ್ತವೆ’: ಗೌರ್ ಗೋಪಾಲ್‌ದಾಸ್

ವಾರ್ತಾಭಾರತಿವಾರ್ತಾಭಾರತಿ27 Oct 2018 10:52 PM IST
share
‘ನಮ್ಮ ಮನೋಭಾವ, ಯೋಚನೆಗಳು ಯಶಸ್ಸಿನ ಉತ್ತುಂಗಕ್ಕೇರಿಸುತ್ತವೆ’: ಗೌರ್ ಗೋಪಾಲ್‌ದಾಸ್

ಮೂಡುಬಿದಿರೆ, ಅ.27: ‘ಯಶಸ್ಸು ಎನ್ನುವುದು ನಾವು ಏನನ್ನು ಹೊಂದಿರುತ್ತೇವೆ ಎನ್ನುವುದನ್ನು ಅವಲಂಬಿಸಿರುವುದಿಲ್ಲ ಬದಲಾಗಿ ನಾವು ಹೇಗೆ ಬದುಕು ತ್ತೇವೆ ಎನ್ನುವುದನ್ನು ಅವಲಂಬಿಸಿರುತ್ತದೆ. ನಾವು ಜೀವನದಲ್ಲಿ ಏನನ್ನಾದರು ಪಡೆಯುವ ಪ್ರಯತ್ನದಲ್ಲಿ ಜೀವಿಸುವುದನ್ನು ಮರೆಯಬಾರದು’ ಎಂದು ಅಂತರಾಷ್ಟ್ರೀಯ ಖ್ಯಾತಿಯ ಜೀವನಕೌಶಲ್ಯ ಗುರು ಗೌರ್ ಗೋಪಾಲ್ ದಾಸ್ ಹೇಳಿದರು.

ಆಳ್ವಾಸ್ ಕಾಲೇಜಿನ ರೋಸ್ಟ್ರಮ್ ಸ್ಪೀಕರ್ಸ್‌ ಕ್ಲಬ್-ವಿದ್ಯಾರ್ಥಿ ವೇದಿಕೆ ಆಯೋಜಿಸಿದ್ದ ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಯಶಸ್ಸಿನ ರಹಸ್ಯ’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಯಶಸ್ಸಿನ ವ್ಯಾಖ್ಯಾನವು ಯಾವಾಗಲೂ ಬದಲಾಗುತ್ತಾ ಇರುತ್ತದೆ. ಒಂದು ಕ್ಷೇತ್ರದಿಂದ ಇನ್ನೊಂದು ಕ್ಷೇತ್ರಕ್ಕೆ ಯಶಸ್ಸಿನ ವ್ಯಾಖ್ಯಾನವು ವಿಭಿನ್ನವಾಗಿರುತ್ತದೆ. ನಮ್ಮ ಪ್ರತಿಭೆ, ಸಾಮರ್ಥ್ಯ, ಕೌಶಲ್ಯ, ವ್ಯಕ್ತಿತ್ವವು ನಮ್ಮನ್ನು ಯಶಸ್ಸಿನೆಡೆಗೆ ಕೊಂಡೊಯ್ಯುವುದಿಲ್ಲ ಬದಲಾಗಿ ನಮ್ಮ ಮನೋಭಾವ, ಯೋಚನಾ ಲಹರಿಗಳು ನಮ್ಮನ್ನು ಯಶಸ್ಸಿನೆಡೆಗೆ ಮುನ್ನಡೆಸುತ್ತದೆ. ಒಬ್ಬ ವ್ಯಕ್ತಿ ತನ್ನ ಜೀವನದ ಸವಾಲುಗಳನ್ನು, ಸಮಸ್ಯೆಗಳನ್ನು ಹೇಗೆ ಪರಿಹರಿಸಿಕೊಳ್ಳುತ್ತಾನೆ ಎಂಬುದರ ಮೇಲೆ ಅವನ ಯಶಸ್ಸನ್ನು ನಿರ್ಧರಿಸಲಾಗುತ್ತದೆ.

ಇಂತಹ ವ್ಯಕ್ತಿಗಳು ಇತರರ ಜೀವನದ ಬಗ್ಗೆ ಕುತೂಹಲಿಗಳಾಗಿರುವುದಿಲ್ಲ, ಬದಲಾಗಿ ತಮ್ಮ ಜಿವನದಲ್ಲಿ ಯಾವ ಮಟ್ಟವನ್ನು ತಲುಪಬಹುದು ಎಂಬುದರ ಬಗ್ಗೆ ಯೋಚಿಸುತ್ತಿರುತ್ತಾರೆ. ಹೀಗಾಗಿ ಅವರು ಅದ್ಭುತ ಯಶಸ್ಸು ಸಾಧಿಸುತ್ತಾರೆ ಎಂದು ಹೇಳಿದರು.

ನಮ್ಮ ಯಶಸ್ಸಿನ ಗುಟ್ಟು ಚೂಸ್, ಚೇಂಜ್,ಕನೆಕ್ಟ್ ಎಂಬ ಮೂರು ‘ಸಿ’ಗಳಲ್ಲಿ ಅಡಗಿದೆ. ನಾವು ಇತರರನ್ನು ಅನುಕರಿಸದೇ ನಮ್ಮ ಜೀವನದ ಉತ್ತಮ ಆವೃತ್ತಿಯಾಗಿ ಹೊರಹೊಮ್ಮಬೇಕು. ನಾವು ಎಂತಹ ಸಂದರ್ಭದಲ್ಲೂ ಅವಕಾಶಗಳನ್ನು ಬಿಟ್ಟುಕೊಡಬಾರದು. ಇಂತಹ ಗುಣಗಳಿಂದ ಮಾತ್ರ ನಾವು ಉನ್ನತ ಸ್ಥಾನಕ್ಕೇರಬಹುದು. ಜೊತೆಗೆ ಕಾಲಕ್ಕೆ ತಕ್ಕಂತೆ ಬದಲಾಗುವುದು, ನಿರಂತರವಾಗಿ ಅಪ್‌ಡೇಟ್ ಆಗುವುದು ಕೂಡ ನಮ್ಮನ್ನು ಯಶಸ್ಸಿನೆಡೆಗೆ ಕೊಂಡೊಯ್ಯುತ್ತದೆ. ಒಂದು ವೇಳೆ ನಾವು ಬದಲಾಗದಿದ್ದರೆ ನಾವು ಏನನ್ನೂ ಸಾಧಿಸಲು ಸಾಧ್ಯವಿಲ್ಲ. ನಮಗೆ ಭಾವನಾತ್ಮಕವಾದ ಅಥವಾ ಆಧ್ಯಾತ್ಮಿಕವಾದ ಬೆಂಬಲ ಇರಬೇಕಾದುದು ಕೂಡ ಮುಖ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ‘ಲೈಫ್’ಸ್ ಅಮೇಜಿಂಗ್ ಸೀಕ್ರೆಟ್’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ, ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ಮೂಡುಬಿದ್ರೆ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಮಹಾ ಚಾರವರ್ಯ ಸ್ವಾಮೀಜಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ತೃತೀಯ ಬಿ.ಎಸ್ಸಿ. ವಿಧ್ಯಾರ್ಥಿ ಆಯನಾ ಡಿ’ಸೋಜಾ ನಿರೂಪಿಸಿದರು.

ಜೀವನದಲ್ಲಿ ಹಣ ಮುಖ್ಯವಲ್ಲ, ನಮ್ಮ ಜೀವನದಲ್ಲಿ ಆಸ್ತಿ, ಹಣ, ಅಂತಸ್ತು ಎಂದಿಗೂ ಮುಖ್ಯವಾಗುವುದಿಲ್ಲ. ಅಂತಸ್ತು ಹೆಚ್ಚಾಗಬಹುದಷ್ಟೇ ಆದರೆ ಜೀವನಕ್ಕೆ ಬೇಕಾದ ಮೂಲಭೂತ ಅವಶ್ಯಕತೆಗಳು ಎಂದಿಗೂ ಹಾಗೆಯೇ ಉಳಿದುಕೊಳ್ಳುತ್ತದೆ. ನಮ್ಮ ಆಲೋಚನೆಗಳು ಶ್ರೀಮಂತವಾಗಬೇಕು, ನಮ್ಮ ಮನೋಭಾವ ಗಳು ಉನ್ನತ ಮಟ್ಟದ್ದಾಗಿರಬೇಕು ಆಗ ಜೀವನ ಶ್ರೀಮಂತವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ತುಳುವಿನಲ್ಲಿ ಮಾತನಾಡಿದ ಗೋಪಾಲ್‌ದಾಸ್ ಗೌರ್ ಗೋಪಾಲ್ ದಾಸ್ ‘ಸೇರಿನ ಮಾತೆರೆಗ್ಲಾ ಸೊಲ್ಮೆಲು, ಯಂಕ್ ನಿಕ್ಲೆನ್ ತೂದ್ ಮಸ್ತ್ ಖುಷಿ ಆಂಡ್, ಯಂಕ್ ತುಳು ಬರ್ಪುಜಿ’ ಎಂದು ತುಳು ಭಾಷೆಯಲ್ಲಿ ಭಾಷಣ ಆರಂಭಿಸಿದರು.

ಆಳ್ವಾಸ್ ಕಾಲೇಜಿನ ವಿದ್ಯಾಗಿರಿ ಆವರಣದ ನುಡಿಸಿರಿ ವೇದಿಕೆಯಲ್ಲಿ ನಡೆದ ಗೋಪಾಲ್‌ದಾಸ್ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಸುಮಾರು 3500 ಜನ ಭಾಗವಹಿಸಿದ್ದರು. ರಾಜಕೀಯ, ಉದ್ಯಮ, ಸಿನಿಮಾ, ರಂಗಭೂಮಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಗೋಪಾಲ್‌ದಾಸ್ ಮಾತುಗಳಿಗೆ ಸಾಕ್ಷಿಯಾದರು. ಜೊತೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X