ಮಂಡ್ಯ: ಜೂಜಾಡುತ್ತಿದ್ದ 26 ಮಂದಿಯ ಬಂಧನ
ಮಂಡ್ಯ, ಅ.28: ಮದ್ದೂರು ತಾಲೂಕು ನಿಡಘಟ್ಟ ಗ್ರಾಮದ ಬಳಿ ಕ್ಲಬ್ ಮೇಲೆ ಪೊಲೀಸರು ದಾಳಿ ಮಾಡಿ ಜೂಜಾಡುತ್ತಿದ್ದ 26 ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ 1,12,930 ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶನಿವಾರ ಸಂಜೆ ಗ್ರಾಮದ ವರದರಾಜಸ್ವಾಮಿ ರಿಕ್ರಿಯೇಷನ್ ಕ್ಲಬ್‍ನ ಮೇಲೆ ದಾಳಿ ನಡೆಸಿದ ಪೊಲೀಸರು ಜೂಜಾಡುತ್ತಿದ್ದವರನ್ನು ಬಂಧಿಸಿ ಪಣಕ್ಕಿಟ್ಟಿದ್ದ ಹಣವನ್ನು ವಶಕ್ಕೆ ಪಡೆದುಕೊಂಡರು ಎನ್ನಲಾಗಿದೆ.
ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





