ಕೇಂದ್ರ ಸಚಿವ ಅನಂತಕುಮಾರ್ ಆರೋಗ್ಯ ವಿಚಾರಿಸಿದ ಸಚಿವ ದೇಶಪಾಂಡೆ
ಬೆಂಗಳೂರು, ಅ. 29: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಅವರ ಯೋಗಕ್ಷೇಮವನ್ನು ವಿಚಾರಿಸಲು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಇಂದು ನಗರದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಅನಂತಕುಮಾರ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಅನಂತಕುಮಾರ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು. ಇದೇ ವೇಳೆ ಆಸ್ಪತ್ರೆ ಮುಖ್ಯಸ್ಥ, ವೈದ್ಯ ಡಾ.ಶ್ರೀನಾಥ್ ಅವರೊಂದಿಗೂ ಚರ್ಚಿಸಿದ ದೇಶಪಾಂಡೆ, ಅನಂತಕುಮಾರ್ ಅವರ ಆರೋಗ್ಯದ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು.
Next Story