ಸ್ಕೂಟರ್ ಢಿಕ್ಕಿ: ಪಾದಚಾರಿ ಮೃತ್ಯು
ಕಾಪು, ಅ.29: ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಟಪಾಡಿ ಸಮೀಪದ ಮಣಿಪುರ ಗುಜ್ಜಿ ಎಂಬಲ್ಲಿ ನಡೆದಿದೆ.
ಮೃತರನ್ನು ಮಹಾಬಲ ಪೂಜಾರಿ(58) ಎಂದು ಗುರುತಿಸಲಾಗಿದೆ.
ಅ.27ರಂದು ಬೆಳಗ್ಗೆ ದೆಂದೂರುಕಟ್ಟೆ ಕಡೆಯಿಂದ ಕಟಪಾಡಿ ಕಡೆ ಬರುತ್ತಿದ್ದ ಸ್ಕೂಟರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಾಬಲ ಪೂಜಾರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಯಿತ್ತೆನ್ನಲಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಮಹಾಬಲ ಪೂಜಾರಿ ಅ.28ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





