ಬಜ್ಪೆಯಲ್ಲಿ ಚೂರಿ ಇರಿತ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಚಿವ ಖಾದರ್ ಶ್ಲಾಘನೆ

ಮಂಗಳೂರು, ಅ.29: ಯುವಕನಿಗೆ ದುಷ್ಕರ್ಮಿಗಳು ಚೂರಿಯಿಂದ ಹಲ್ಲೆ ನಡೆಸಿದ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬಜ್ಪೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಮೂಲಕ ಕ್ಷಿಪ್ರ ಕಾರ್ಯಾಚರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಚೂರಿ ಇರಿತಕ್ಕೆ ಕಾರಣವೇನು, ಅದರ ಹಿನ್ನೆಲೆ ಕುರಿತು ವಿಚಾರಣೆ ನಡೆಸುತ್ತಿದ್ದಾರೆ ಎಂದು ಬಜ್ಪೆ ಠಾಣೆ ಮೂಲಗಳು 'ವಾರ್ತಾಭಾರತಿ'ಗೆ ತಿಳಿಸಿವೆ.
Next Story





