Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತರಿಗೆ ಸ್ವಯಂ ಉದ್ಯೋಗ ಕಲ್ಪಿಸಲು...

ದಲಿತರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಸಮೃದ್ಧಿ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

10 ಲಕ್ಷ ರೂ.ವರೆಗೆ ಆರ್ಥಿಕ ನೆರವು

ವಾರ್ತಾಭಾರತಿವಾರ್ತಾಭಾರತಿ30 Oct 2018 6:21 PM IST
share
ದಲಿತರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ಸಮೃದ್ಧಿ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ.30: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸುಮಾರು 800ಕೋಟಿ ರೂ.ವೆಚ್ಚದಲ್ಲಿ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ‘ಸಮೃದ್ಧಿ’ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಸಮೃದ್ಧಿ ಯೋಜನೆ ಕುರಿತು ಮಾಹಿತಿ ನೀಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪಂಗಡದವರನ್ನು ಉದ್ಯಮಿಗಳನ್ನಾಗಿ ರೂಪಿಸಲು ಖಾಸಗಿ ಸಹಭಾಗಿತ್ವದಲ್ಲಿ ಸಮೃದ್ಧಿ ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದು ಹೇಳಿದರು.

ಈ ವರ್ಷ ಹತ್ತು ಸಾವಿರ ಸ್ವಯಂ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ. ಸಮಾಜ ಕಲ್ಯಾಣ ಇಲಾಖೆಗೆ ಬರುವ ಅನುದಾನದಡಿ ಪ್ರತಿವರ್ಷ ಇಷ್ಟೆ ಪ್ರಮಾಣದಲ್ಲಿ ಸ್ವಯಂ ಉದ್ಯೋಗಿಗಳನ್ನು ರೂಪಿಸಲಾಗುವುದು. ಇದಕ್ಕೆ ಕೇಂದ್ರ ಸರಕಾರದಿಂದ ಯಾವುದೆ ಅನುದಾನ ಪಡೆಯುವುದಿಲ್ಲವೆಂದು ಅವರು ಸ್ಪಷ್ಟ ಪಡಿಸಿದರು.

10 ಲಕ್ಷ ರೂ.ನೆರವು: ದೇಶದಲ್ಲೆ ಪ್ರಥಮ ಬಾರಿಗೆ ‘ಸಮೃದ್ಧಿ’ ಅಂತಹ ಮಹತ್ವದ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ. ಪ್ರತಿ ಫಲಾನುಭವಿಗೆ 10 ಲಕ್ಷ ರೂ.ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ. ಇದರ ಜತೆಗೆ ಉದ್ಯಮಶೀಲತೆ, ಕೌಶಲ್ಯ ತರಬೇತಿ, ಮಾರುಕಟ್ಟೆ, ತಾಂತ್ರಿಕ ನೆರವು ಸೇರಿದಂತೆ ಉದ್ಯಮ ಆರಂಭಿಸಲು ಎಲ್ಲ ಅಗತ್ಯವಾದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.

ಚಿಲ್ಲರೆ ಮಳಿಗೆ, ವೋಲ್ವೋ ಕ್ಯಾಬ್, ಚಾಯ್ ಪಾಯಿಂಟ್, ಬಾಟಾ, ಪ್ಯಾರಾಗಾನ್ ಅಂಗಡಿ, ಕಾಫಿ ಮಾರಾಟ ಮಳಿಗೆ, ಮೊಬೈಲ್ ಮಾರಾಟ ಮತ್ತು ದುರಸ್ತಿ, ಬ್ರಾಂಡೆಂಡ್ ಮೆಡಿಕಲ್ ಸ್ಟೋರ್, ಹಟ್ಟಿ ಕಾಫಿ ಹೀಗೆ ವಿವಿಧ ವ್ಯಾಪಾರಗಳನ್ನು ಆರಂಭಿಸಲು ಸಂಬಂಧಿಸಿದ ಸಂಸ್ಥೆಗಳಿಂದ ಉಚಿತ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ಸಮೃದ್ಧಿ ಯೋಜನೆಯಡಿ ಬರುವ ಸ್ವಯಂ ಉದ್ಯೋಗಿಗಳ ಒಟ್ಟು ಮಂಜೂರಾತಿಯಲ್ಲಿ ಮಹಿಳೆಯರು, ವಿಕಲಚೇತನರು ಹಾಗೂ ಅಂತರ್ಜಾತಿ ವಿವಾಹಿತ ಫಲಾನುಭವಿಗಳಿಗೆ ಆದ್ಯತೆ ನೀಡಲಾಗುವುದು. ಹಾಗೂ ಸರಕಾರ ನೀಡುವ ಧನಸಹಾಯ ದುರುಪಯೋಗವಾಗದಂತೆ ಮುಂಜಾಗ್ರತೆ ವಹಿಸಲಾಗುವುದು ಎಂದು ಅವರು ಹೇಳಿದರು.

ಸಮೃದ್ಧಿ ಯೋಜನೆಯಡಿ ಸ್ವಯಂ ಉದ್ಯೋಗ ಮಾಡಬಯಸುವ ಎಸ್ಸಿ, ಎಸ್ಟಿ ಸಮುದಾಯದ ಯುವಕ-ಯುವತಿಯರು ನ.7ರಿಂದ www.kalyanakendra.com ವೆಬ್‌ಸೈಟ್‌ನಲ್ಲಿ ಒಂದು ತಿಂಗಳವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ ಎಸೆಸೆಲ್ಸಿ ತೇರ್ಗಡೆಯಾಗಿರಬೇಕು. 21 ವರ್ಷದ ಮೇಲ್ಪಟ್ಟವರಾಗಿರಬೇಕು. ವಾರ್ಷಿಕ ಆದಾಯ 5ಲಕ್ಷ ರೂ.ಮೀರಿರಬಾರದು.

-ಪ್ರಿಯಾಂಕ ಖರ್ಗೆ, ಸಚಿವ, ಸಮಾಜ ಕಲ್ಯಾಣ ಇಲಾಖೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X