ಎಸೆಸೆಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.30: ಮಾರ್ಚ್ /ಏಪ್ರಿಲ್-2019ರ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಮಾ.21ರಿಂದ ಎ.4 ರವರೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಿ, ಮಂಡಳಿಯ www.kseeb.kar.nic.in ಅಂತಾರ್ಜಾಲದಲ್ಲಿ ಪ್ರಕಟಿಸಲಾಗಿದೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಸದರಿ ತಾತ್ಕಾಲಿಕ ವೇಳಾಪಟ್ಟಿಗೆ ಸಂಬಂಧಿಸಿದಂತೆ ಅ.31ರಿಂದ ನ.29ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನಿರ್ದೇಶಕರು(ಪರೀಕ್ಷೆಗಳು), ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, 6ನೆ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560 003. ಈ ವಿಳಾಸಕ್ಕೆ ನೇರವಾಗಿ ಅಂಚೆ ಮೂಲಕ ಕಳುಹಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





