ಮಂಡ್ಯ: ರಸ್ತೆ ವಿಭಜಕಕ್ಕೆ ಕಾರು ಢಿಕ್ಕಿ; ಓರ್ವ ಮೃತ್ಯು

ಮಂಡ್ಯ, ಅ.30: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿಯೊಡೆದು, ನಂತರ ಮುಂದೆ ಸಾಗುತ್ತಿದ್ದ ಇತರ ಕಾರುಗಳಿಗೂ ಢಿಕ್ಕಿಯಾಗಿ ಓರ್ವ ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಹಳೇಬೂದನೂರು ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಬೆಂಗಳೂರಿನ ಬನಶಂಕರಿಯ ನಿವಾಸಿ ಎನ್ನಲಾದ ದೀಪು ಸಾವನ್ನಪ್ಪಿದ್ದು, ಬೆಂಗಳೂರಿನ ಮೂಲದವರಾದ ಜಯರಾಂ, ಕುಮಾರ್, ಮಂಜುನಾಥ್, ಸುರೇಶ್ ಹಾಗೂ ಮಾನ್ಸಿ ಜಾರ್ಜ್ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





