ಬೆಂಗಳೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಬೆಂಗಳೂರು, ಅ.30: ಖಾಸಗಿ ಕಂಪೆನಿ ಉದ್ಯೋಗಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಮಿಳುನಾಡು ಮೂಲದ ಸೇತು ಕುಮಾರ್ (29) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಎಂಎಸ್ಸಿ ಪದವಿ ಪೂರ್ಣಗೊಳಿಸಿ ವಿಪ್ರೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಎನ್ನಲಾಗಿದೆ. ಸೋಮವಾರ ರಾತ್ರಿ 10:30ರ ವೇಳೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ನಿಲಾದ್ರಿ ನಗರದ ನಾಯಕ ಹೆಸರಿನ ಅತಿಥಿಗೃಹದಲ್ಲಿ (ಪಿಜಿ) ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





