ಬೆಂಗಳೂರು: ಅನಧಿಕೃತ ನಗದು ಪತ್ತೆ
ಬೆಂಗಳೂರು, ಅ.30: ನಗರದ ಹೊರವಲಯದ ದಾಸನಪುರ ಉಪನೋಂದಣಾಧಿಕಾರಿ ಕಚೇರಿಯಲ್ಲಿ 5,69,210 ರೂ. ಅನಧಿಕೃತ ನಗದು ಪತ್ತೆಯಾಗಿದ್ದು, ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ದಾಸನಪುರ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಬಂದ ದೂರುಗಳನ್ನಾಧರಿಸಿ ಸೋಮವಾರ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಕಚೇರಿಯನ್ನು ಶೋಧಿಸಿದರು.
ಈ ವೇಳೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ, ದಲ್ಲಾಳಿ ಹಾಗೂ ಖಾಸಗಿ ವ್ಯಕ್ತಿಯೊಬ್ಬರ ಬಳಿ 5,69,210 ರೂ. ಗಳ ಅನಧಿಕೃತ ಹಣ ಪತ್ತೆಯಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸಿಬಿ ಪ್ರಕಟನೆ ತಿಳಿಸಿದೆ.
Next Story





