Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಣ್ಣಬಣ್ಣದ ಮಾತುಗಳಿಂದ ಜನರನ್ನು ಮೋಡಿ...

ಬಣ್ಣಬಣ್ಣದ ಮಾತುಗಳಿಂದ ಜನರನ್ನು ಮೋಡಿ ಮಾಡುತ್ತಿರುವ ಮೋದಿ: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ30 Oct 2018 10:26 PM IST
share
ಬಣ್ಣಬಣ್ಣದ ಮಾತುಗಳಿಂದ ಜನರನ್ನು ಮೋಡಿ ಮಾಡುತ್ತಿರುವ ಮೋದಿ: ಮಲ್ಲಿಕಾರ್ಜುನ ಖರ್ಗೆ

ಶಿವಮೊಗ್ಗ, ಅ. 31: ಅಚ್ಛೇ ದಿನ್ ತರುವುದಾಗಿ ಅಧಿಕಾರಕ್ಕೇರಿದ ಮೋದಿ, ದೇಶವಾಸಿಗಳನ್ನು ಸಂಕಷ್ಟಕ್ಕೆ ದೂಡಿದ್ದಾರೆ. ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗದಂತೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. 

ಮಂಗಳವಾರ ಸಂಜೆ ನಗರದ ಎನ್‍ಇಎಸ್ ಮೈದಾನದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಅವರು ಮಾತನಾಡಿದರು.

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲಿಯೂ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ತೈಲ ಬೆಲೆ, ಗ್ಯಾಸ್ ದರದಲ್ಲಿ ವಿಪರೀತ ಹೆಚ್ಚಳವಾಗಿದೆ. ದರ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೊಂದು ಜನವಿರೋಧಿ ಸರ್ಕಾರವಾಗಿದೆ ಎಂದು ದೂರಿದರು.  ಜನಸಾಮಾನ್ಯರಿಗೆ ಅನುಕೂಲಕರವಾಗುವ ಯಾವುದೇ ಕಾರ್ಯಕ್ರಮ ಜಾರಿಗೊಳಿಸದ ಮೋದಿ, ಬರೀ ಪೊಳ್ಳು ಆಶ್ವಾಸನೆ ಹಾಗೂ ಭರವಸೆ ನೀಡುವಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ. ಬಣ್ಣಬಣ್ಣದ ಮಾತುಗಳನ್ನಾಡುತ್ತಾ ಜನರನ್ನು ಮೋಡಿ ಮಾಡುತ್ತಿದ್ದಾರೆ ಎಂದು ಕುಟುಕಿದರು.

ಮೋದಿ ಅಧಿಕಾರಾವಧಿಯಲ್ಲಿ ದೊಡ್ಡ ದೊಡ್ಡ ಉದ್ಯಮಿಗಳಿಗೆ ಅನುಕೂಲವಾಗಿದೆ. ಬಡವರ ಉದ್ದಾರಕ್ಕೆ ಈ ಕೇಂದ್ರ ಸರ್ಕಾರ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಸರ್ಕಾರದ ದುರಾಡಳಿತದಿಂದ ದೇಶವಾಸಿಗಳು ಬೇಸತ್ತಿದ್ದಾರೆ. ಈ ಕಾರಣದಿಂದ ಮುಂಬರುವ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ನಿರ್ಧರಿಸಿದ್ದಾರೆ. ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳು ಹೇಳ ಹೆಸರಿಲ್ಲದಂತೆ ಧೂಳೀಪಟವಾಗಲಿರುವುದು ನಿಶ್ಚಿತವಾಗಿದೆ ಎಂದರು. 

ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರು ಸಮಾನಮನಸ್ಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿಯೇ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. 

ಈ ಉಪ ಚುನಾವಣೆಯಲ್ಲಿ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಬೇಕು. ಬಿಜೆಪಿ ಅಭ್ಯರ್ಥಿಗಳು ಪರಾಭವಗೊಳ್ಳಬೇಕು. ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಹೊಸ ಸಂದೇಶ ರವಾನಿಸಬೇಕು. ರಾಹುಲ್ ಗಾಂಧಿ ಕೈ ಬಲಪಡಿಸುವ ಕೆಲಸವಾಗಬೇಕು ಎಂದು ಹೇಳಿದರು. 

ಸಮಾರಂಭದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಮುಖಂಡರಾದ ಡಿ.ಕೆ.ಶಿವಕುಮಾರ್, ಶಾಮನೂರು ಶಿವಶಂಕರಪ್ಪ, ಬಂಡೆಪ್ಪ ಕಾಶೆಂಪುರ್, ಅಭ್ಯರ್ಥಿ ಮಧು ಬಂಗಾರಪ್ಪ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X