Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯೋಜನೆಗಳ ಅನುಷ್ಠಾನ, ಅಭಿವೃದ್ಧಿಯ ಚಿತ್ರಣ...

ಯೋಜನೆಗಳ ಅನುಷ್ಠಾನ, ಅಭಿವೃದ್ಧಿಯ ಚಿತ್ರಣ ನೀಡಲು ಪೊನ್ನುರಾಜ್ ಸೂಚನೆ

ದ.ಕ.ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ30 Oct 2018 10:35 PM IST
share
ಯೋಜನೆಗಳ ಅನುಷ್ಠಾನ, ಅಭಿವೃದ್ಧಿಯ ಚಿತ್ರಣ ನೀಡಲು ಪೊನ್ನುರಾಜ್ ಸೂಚನೆ

ಮಂಗಳೂರು, ಅ.30: ರಾಜ್ಯ ಸರಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ವೇಳೆ ಕೇವಲ ಅಂಕಿ ಅಂಶಗಳ ಮೂಲಕ ಗುರಿ-ಸಾಧನೆ ಮಾಹಿತಿಗಿಂತ ಮುಖ್ಯವಾಗಿ ಯೋಜನೆಗಳಿಂದ ಜನರಿಗಾದ ಲಾಭಗಳ ಸಮಗ್ರ ಮಾಹಿತಿ ನೀಡಲು ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸೂಚಿಸಿದರು.

ದ.ಕ.ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಪೊನ್ನುರಾಜ್ ಜಿಪಂ ಇಂಜಿನಿಯರಿಂಗ್ ವಿಭಾಗ ಕೈಗೆತ್ತಿಕೊಂಡಿರುವ ‘ನಮ್ಮ ಗ್ರಾಮ ನಮ್ಮ ರಸ್ತೆ’ ಮತ್ತು ಬಹುಗ್ರಾಮ ಕುಡಿಯುವ ನೀರಿನಂತಹ ಯೋಜನೆಗಳಿಂದ ಜನರಿಗಾದ ಅನುಕೂಲತೆಯ ಬಗ್ಗೆ ವಿಭಾಗಕ್ಕೆ ಮಾಹಿತಿ ಇರಬೇಕು. ಯೋಜನೆಗಳು ನಿರರ್ಥಕವಾಗದಂತೆ, ಭವಿಷ್ಯದಲ್ಲಿ ನಿಷ್ಫಲವಾಗದಂತೆ ಅನುಷ್ಠಾನಕ್ಕೆ ತರಬೇಕು ಎಂದರು. 

ಪ್ರಗತಿ ಪರಿಶೀಲನೆ ಸಂದರ್ಭ ಸಾಧನೆಗಳನ್ನು ಪುಸ್ತಕಗಳ ನೆರವಿಲ್ಲದೆ ಹೇಳುವಂತಹ ಅಧಿಕಾರಿಗಳಿರಬೇಕು. ದ.ಕ.ಜಿಲ್ಲೆಯಲ್ಲಿ ಅಧಿಕಾರಿಗಳು ಇನ್ನಷ್ಟು ವೇಗದಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದ ಪೊನ್ನುರಾಜ್, ಎಕ್ಸಿಕ್ಯೂಟಿವ್ ಇಂಜಿನಿಯರ್‌ಗಳೆಂದರೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ವರದಿ ನೀಡಬೇಕೇ ವಿನಃ ಸ್ಥಳದಲ್ಲೇ ಕುಳಿತು ವರದಿ ನೀಡುವವರಾಗಬಾರದು ಎಂದರು. ಜಿಲ್ಲೆಯಲ್ಲಿ ಮಳವೂರು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ 10 ಗ್ರಾಮಗಳ 60 ಜನವಸತಿ ಪ್ರದೇಶಗಳಿಗೆ ನೀರು ಪೂರೈಸಲಾಗುತ್ತಿದೆ ಎಂದು ಪಿಆರ್‌ಇಡಿ ಇಂಜಿನಿಯರ್ ಮಾಹಿತಿ ನೀಡಿದರು. ಈ ಯೋಜನೆಯ ಸುಸ್ಥಿರ ಅಭಿವೃದ್ಧಿಗೆ ಅಳವಡಿಸಲಾಗಿರುವ ಕ್ರಿಯಾ ಯೋಜನೆಯ ಚಿತ್ರಣ ನೀಡಿ ಎಂದ ಪೊನ್ನುರಾಜ್, ಯೋಜನೆ ಅನುಷ್ಠಾನದಷ್ಟೆ ಮುಖ್ಯ ನಿರಂತರ ಸದುಪಯೋಗವಾಗಿದೆ. ಈ ಬಗ್ಗೆ ಇಂಜಿನಿಯರ್ ಕಾಳಜಿ ವಹಿಸಬೇಕು ಎಂದರು.

ಜಿಪಂ ಸಿಇಒ ಡಾ ಸೆಲ್ವಮಣಿ ಆರ್. ನರೇಗಾದಡಿ ಕೈಗೊಂಡ ಕಾಮಗಾರಿ, ವಸತಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ವೆನ್ಲಾಕ್ ಆಸ್ಪತ್ರೆಯ ಸಮಸ್ಯೆಯ ಬಗ್ಗೆ ಆಸ್ಪತ್ರೆಯ ಅಧೀಕ್ಷಕಿ ಡಾ. ರಾಜೇಶ್ವರಿ ದೇವಿ ಗಮನಸೆಳೆದರು. ಜಿಲ್ಲೆಯ ಎಂಡೋಸಲ್ಫಾನ್ ಪೀಡಿತರ ಬೇಡಿಕೆಯ ಬಗ್ಗೆ ಅಪರ ಜಿಲ್ಲಾಧಿಕಾರಿ ಕುಮಾರ್ ವಿವರಿಸಿದರು.

ನಗರಾಭಿವೃದ್ಧಿ, ನಗರೋತ್ಥಾನ, ಸ್ವಚ್ಛ ಭಾರತ್ ಮಿಷನ್, ಆಹಾರ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಮೆಸ್ಕಾಂ ಇಲಾಖೆ, ಸಹಕಾರಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ, ಕೌಶಲ್ಯಾಭಿವೃದ್ಧಿ, ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X