ನ. 4: ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿ-2018

ಮಂಗಳೂರು, ಅ.31: ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೊಟರ್ಸ್ ಏರ್ಪಡಿಸಿದ ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿ-2018 ಉದ್ಘಾಟನಾ ಕಾರ್ಯಕ್ರಮವನ್ನು ನಗರದ ಲಾಲ್‌ಬಾಗ್‌ನ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನ. 4ರಂದು ಬೆಳಗ್ಗೆ 8:30ಕ್ಕೆ ಹಮ್ಮಿಕೊಳ್ಳಲಾಗಿದೆ.
ಪಂದ್ಯಾವಳಿಯನ್ನು ಶ್ರೀದೇವಿ ಎಜುಕೇಶನ್ ಟ್ರಸ್ಟ್ ಆ್ಯಂಡ್ ಡಿಕೆಡಿಬಿಎ ಅಧ್ಯಕ್ಷ ಸದಾನಂದ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಯಾಗಿ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ (ಕೆಸಿಸಿಐ)ನ ಅಧ್ಯಕ್ಷ ಪಿ.ಬಿ.ಅಬ್ದುಲ್ ಹಮೀದ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ನಝೀರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಹಾಜಿ ಎಸ್.ಎಂ.ರಶೀದ್ ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಬಿಇಎಡಿಎಸ್ ಡೀನ್ ಎ.ಆರ್. ಮುಹಮ್ಮದ್ ನಿಸಾರ್, ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೊಟರ್ಸ್‌ನ ಅಧ್ಯಕ್ಷ ನೂರ್ ಮುಹಮ್ಮದ್, ಮಂಗಳಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಿ.ಎಸ್. ಭಂಡಾರಿ, ಮಂಗಳೂರು ಸ್ಪೋರ್ಟ್ಸ್ ಪ್ರೊಮೊಟರ್ಸ್‌ನ ಐವನ್ ಪಿಂಟೊ ಮತ್ತಿತರರು ಭಾಗವಹಿಸಲಿದ್ದಾರೆ.
ಪ್ರಶಸ್ತಿ ವಿತರಣಾ ಕಾರ್ಯಕ್ರಮ
ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೊಟರ್ಸ್ ಏರ್ಪಡಿಸಿದ ಬ್ಯಾರೀಸ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜಯಶಾಲಿಗಳಿಗೆ ಪ್ರಶಸ್ತಿ ವಿತರಿಸುವ ಕಾರ್ಯಕ್ರಮವನ್ನು ನ.4ರಂದು ಸಂಜೆ 7:30ಕ್ಕೆ ಹಮ್ಮಿಕೊಂಡಿದ್ದು, ಸಮಾರೋಪ ಸಮಾರಂಭದ ಮುಖ್ಯಅತಿಥಿಯಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಂಬರ್ ಗ್ರೂಪ್ ಶಾರ್ಜಾದ ಎಂಡಿ ಕೆ.ಎಲ್.ಪಿ. ಯೂಸುಫ್, ಸುಲ್ತಾನ್ ಗೋಲ್ಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಟಿ.ಎಂ.ಅಬ್ದುಲ್ ರವೂಫ್, ಮಂಗಳೂರು ಆದಾಯ ತೆರಿಗೆ ಅಧಿಕಾರಿ ಪರಿಮೆಲಝಗನ್ ಪಿ.ಜೆ., ಯುಎಇ ರಾಷ್ಟ್ರಾಧ್ಯಕ್ಷರ ಖಾಸಗಿ ಇಲಾಖೆಯ ಮಾಜಿ ಸಿಬ್ಬಂದಿ ಇಸ್ಮಾಯೀಲ್ ಪಿ.ಕೆ., ವಿಶ್ವಾಸ್ ಬಾವಾ ಬಿಲ್ಡರ್ಸ್‌ನ ಅಬ್ದುಲ್ ರವೂಫ್ ಪುತ್ತಿಗೆ, ಎ.ಕೆ. ಆ್ಯಪಲ್ ಗ್ರೂಪ್‌ನ ನಿರ್ದೇಶಕ ಎ.ಕೆ.ನೌಶಾದ್, ಬ್ಯಾರೀಸ್ ಸ್ಪೋರ್ಟ್ಸ್ ಪ್ರೊಮೊಟರ್ಸ್‌ನ ಅಧ್ಯಕ್ಷ ನೂರ್ ಮುಹಮ್ಮದ್, ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎ.ಎಸ್.ವೆಂಕಟೇಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.







