ಕರಂದಕ್ಕಾಡ್: ಸ್ಕೂಟರ್‌ಗೆ ಲಾರಿ ಢಿಕ್ಕಿ; ಓರ್ವ ಮೃತ್ಯು

ಕಾಸರಗೋಡು, ನ.1: ಸ್ಕೂಟರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ದಾರುಣ ಘಟನೆ ನಿನ್ನೆ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕರಂದಕ್ಕಾಡ್ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ತಳಂಗರೆ ಖಾಸಿ ಲೈನ್‌ನ ಮುಜೀಬ್ ರಹ್ಮಾನ್(42) ಎಂದು ಗುರುತಿಸಲಾಗಿದೆ. ಇವರು ಕಾಸರಗೋಡು ಹೊಸ ಬಸ್ಸು ನಿಲ್ದಾಣ ಸಮೀಪದ ಮಳಿಗೆಯೊಂದರ ಮಾಲಕರಾಗಿದ್ದರು.
ಕಳೆದ ರಾತ್ರಿ 11 ಗಂಟೆಗೆ ಇವರು ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಮುಜೀಬ್ ರಹ್ಮಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





