ರಾಜ್ಯಮಟ್ಟದ ಕಾವ್ಯ ಕಮ್ಮಟಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ನ.2 : ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಡಿಸೆಂಬರ್ ಎರಡನೇ ವಾರದಲ್ಲಿ ರಾಜ್ಯಮಟ್ಟದ ಕಾವ್ಯ ಕಮ್ಮಟ ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸಲು ಆಸಕ್ತಿಯುಳ್ಳವರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಮ್ಮಟದಲ್ಲಿ ಭಾಗವಹಿಸಲು ಆಸಕ್ತಿಯಿರುವ 20 ರಿಂದ 45 ವರ್ಷದ ವಯೋಮಿತಿಯವರು ಸಂಬಂಧಿಸಿದ ಅಗತ್ಯ ದಾಖಲೆ ಲಗತ್ತಿಸಿ ಅರ್ಜಿ ಸಲ್ಲಿಸಬೇಕು.
ಈಗಾಗಲೇ ಅಭ್ಯರ್ಥಿಗಳ ಬಿಡಿ ಕವನ ಅಥವಾ ಕವನ ಸಂಕಲನ ಪ್ರಕಟಗೊಂಡಿದ್ದರೆ ಅಕಾಡೆಮಿಯ ಗಮನಕ್ಕೆ ತರಬೇಕು. ರಾಮನಗರದ ಕೆರೆಮೇಗಳ ದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ ಕಾವ್ಯ ಕಮ್ಮಟ ಶಿಬಿರ ನಡೆಯಲಿದೆ.
ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಅಕಾಡೆಮಿ ವೆಬ್‌ಸೈಟ್ http://karnatakasahithyaacademy.org ನಿಂದ ಪಡೆಯಬಹುದು. ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ನವೆಂಬರ್ ಕೊನೆಯ ವಾರದಲ್ಲಿ ಪ್ರಕಟ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 080- 2221 1730 ಅಥವಾ 22106460 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





