Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ...

ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಬಂಡೆಪ್ಪ ಕಾಶೆಂಪೂರ್

ವಾರ್ತಾಭಾರತಿವಾರ್ತಾಭಾರತಿ2 Nov 2018 6:56 PM IST
share
ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಬಂಡೆಪ್ಪ ಕಾಶೆಂಪೂರ್

ಬೀದರ್, ನ.2: ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪ್ಲಾನ್ ತಯಾರಿಸುವ ವಿಷಯದಲ್ಲಿ ಬಹುತೇಕ ಅಧಿಕಾರಿಗಳು ಆಸಕ್ತಿ ತೋರುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಕೆಲವು ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ನಡೆದ ಸಭೆಗಳಲ್ಲಿ ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ, ಕೈಗಾರಿಕಾ ವಲಯಗಳನ್ನು ಆದ್ಯತಾ ವಲಯ ಎಂದು ಗುರುತಿಸಿ, ಇಲ್ಲಿನ ಕಾರ್ಯಕ್ಕೆ ಮೊದಲ ಆದ್ಯತೆ ನೀಡಲು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಈ ಕ್ಷೇತ್ರಗಳಲ್ಲಿ ನೀವು ಮಾಡಿದ್ದೇನು? ಮಾಡಬೇಕಿರುವುದೇನು? ಎಂಬುದರ ಬಗ್ಗೆ ಒಂದು ಪ್ರಸ್ತಾವನೆ ತಯಾರಿಸಿ ಸಲ್ಲಿಸಲು ಸೂಚಿಸಲಾಗಿತ್ತು. ಆದರೆ, ಯಾವ ಅಧಿಕಾರಿಗಳು ಕೂಡ ಇಲ್ಲಿವರೆಗೆ ತಮ್ಮನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿಲ್ಲ. ಯಾರು ಕೂಡ ಇದುವರೆಗೆ ವರದಿ ನೀಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಧಿಕಾರಿಗಳ ಈ ಕಾರ್ಯವೈಖರಿ ಸರಿಯಲ್ಲ. ವರದಿ ಕೇಳಲು ನಿಮ್ಮನ್ನು ಇಲ್ಲಿಗೆ ಕರೆದಿಲ್ಲ. ಕೆಡಿಪಿ ಅಥವಾ ಇನ್ನಿತರ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದ ಸೂಚನೆಗಳಿಗೆ ಬೆಲೆ ಇಲ್ಲವೇ? ಎಂದು ಬಂಡೆಪ್ಪ ಕಾಶೆಂಪೂರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಹೇಳಿದ ಕೆಲಸವನ್ನು ಮಾಡುವಲ್ಲಿ ಆಸಕ್ತಿ ತೋರದಿದ್ದರೆ ಅಂತಹ ಅಧಿಕಾರಿಗಳ ಮೇಲೆ ಮುಲಾಜಿಲ್ಲದೇ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓಗೆ ಅವರು ತಿಳಿಸಿದರು.

ಐದು ಆದ್ಯತಾ ವಲಯಗಳಲ್ಲಿ ಬದಲಾವಣೆ ಎದ್ದು ಕಾಣುವ ನಿಟ್ಟಿನಲ್ಲಿ ಕೆಲಸ ನಡೆಯಲು ಯೋಜನೆ ರೂಪಿಸಲು ತಿಳಿಸಲಾಗಿತ್ತು. ಎಚ್‌ಕೆಆರ್‌ಡಿಬಿಯಲ್ಲಿ ಅನುದಾನ ಇದೆ. ಹಣಕ್ಕೆ ಕೊರತೆ ಇಲ್ಲ ಎಂದು ಹೇಳಲಾಗಿತ್ತು ಎಂದು ಅಧಿಕಾರಿಗಳಿಗೆ ಅವರು ಮತ್ತೊಮ್ಮೆ ನೆನಪಿಸಿದರು.

ಹಣ ತರಲು ಸಿದ್ಧ: ಜಿಲ್ಲೆಗೆ ಹೆಚ್ಚಿನ ಅನುದಾನ ತರಲು ನಾನು ಈಗಲೂ ಸಿದ್ಧನಿದ್ದೇನೆ. ವಿಶೇಷ ಪ್ಯಾಕೇಜ್ ನೀಡಲು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಐದು ವಲಯಗಳಲ್ಲಿ ಏನು ಮಾಡಬಹುದು ಎಂಬುದರ ಬಗ್ಗೆ ಆಯಾ ಇಲಾಖಾಧಿಕಾರಿಗಳು ಇನ್ನಾದರೂ ಪ್ರಸ್ತಾವನೆ ತಯಾರಿಸಿ ಕೂಡಲೇ ಸಲ್ಲಿಸಬೇಕು ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

207 ಕೋಣೆಗಳನ್ನು ನೆಲಸಮ ಮಾಡಲಾಗಿದೆ. ಅಧ್ಯಯನದಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ಅವರಿಗೆ ವಿಶೇಷ ತರಗತಿ ನಡೆಸಲು ಯೋಜಿಸಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಸಭೆಗೆ ತಿಳಿಸಿದರು. ಈ ಹಿಂದೆ ತಿಳಿಸಿದ ಕೆಲಸವನ್ನೇಕೆ ಮಾಡಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗೆ ಪ್ರಶ್ನಿಸಿದ ಅವರು, ಕೂಡಲೇ ಕ್ರಿಯಾಯೋಜನೆ ರೂಪಿಸಿ. ಅದನ್ನು ತಮ್ಮ ಬಳಿ ತಂದು ವಿವರಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ವ್ಯಾಪಕ ಅರಿವು ಮೂಡಿಸಿ: ವಿಪರೀತವಾಗಿ ಹೆಚ್ಚುತ್ತಿರುವ ಡೆಂಗ್ ಮತ್ತು ಎಚ್1ಎನ್1 ತಡೆಗೆ ಕಾರ್ಯಕ್ರಮ ರೂಪಿಸಬೇಕು. ಪ್ರತಿಯೊಂದು ಹಳ್ಳಿಯಲ್ಲಿ ಕರಪತ್ರ ವಿತರಣೆಯಂತಹ ಜಾಗೃತಿ ಕಾರ್ಯಕ್ರಮಗಳಾಗಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಹಾಗೂ ಟಿವಿವಾಹಿನಿಯಲ್ಲಿ ವಾರ್ತಾ ಇಲಾಖೆಯ ಮೂಲಕ ಪ್ರಚಾರ ನಡೆಸಲು ಪ್ರಸ್ತಾವನೆಯನ್ನು ಸಲ್ಲಿಸಿ ಕ್ರಮವಹಿಸಿ ಎಂದು ವಾರ್ತಾಧಿಕಾರಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಬರ ಪರಿಹಾರ ಕಾರ್ಯ: ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಬರ ಘೋಷಣೆಯಾಗಿದೆ. ಇಲ್ಲಿ ಪರಿಹಾರ ಕಾರ್ಯ ತೀವ್ರ ರೀತಿಯಲ್ಲಿ ನಡೆಯಲಿ ಎಂದು ಸಚಿವರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್.ಆರ್.ಮಹಾದೇವ, ಜಿಪಂ ಸಿಇಓ ಮಹಾಂತೇಶ ಬೀಳಗಿ, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X