ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ಪುತ್ತೂರು, ನ. 2: ಕಾಲೇಜು ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳ್ಳಾರೆ ಠಾಣೆ ವ್ಯಾಪ್ತಿಯ ಕೋಡಿಯಾಳ ಗ್ರಾಮದ ಕಲ್ಪಡ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ.
ಇಲ್ಲಿನ ದಿ. ನಾರಾಯಣ ಗೌಡ ಎಂಬವರ ಪುತ್ರಿ, ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಿ (17) ಆತ್ಮಹತ್ಯೆ ಮಾಡಿಕೊಂಡವರು. ಯುಕ್ತಿ ತಮ್ಮ ಮನೆಯ ಪಕ್ಕದ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರ ಸಹೋದರ ಮೋಹನ್ ಕುಮಾರ್ ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ.
Next Story





