ಮರಳುಗಾರಿಕೆ: ಪರವಾನಿಗೆದಾರರ ಪಟ್ಟಿಗೆ ಸಾರ್ವಜನಿಕರ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಉಡುಪಿ, ನ.2: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ವ್ಯಾಪ್ತಿಯಲ್ಲಿ ಗುರುತಿಸಿರುವ ಮರಳು ದಿಬ್ಬಗಳಲ್ಲಿ ತಾತ್ಕಾಲಿಕ ಪರವಾನಿಗೆ ಪಡೆಯಲು ಆಸಕ್ತರಿಂದ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಅದರಂತೆ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ಮರಳು ದಿಬ್ಬಗಳನ್ನು ತೆರವುಗೊಳಿಸಲು ಒಟ್ಟು 97 ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಸಲ್ಲಿಸಿರುವ ಪರವಾನಿಗೆದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಸ್ವೀಕೃತಿಗೊಂ ಡಿರುವ 97 ಅರ್ಜಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಮೂರು ದಿನಗಳೊಳಗೆ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖಾ ಕಚೇರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನೂತನ ಹಿರಿಯ ಭೂವಿಜ್ಞಾನಿ ಪದ್ಮಜಾ ಎಂ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





