ರಾಜ್ಯೋತ್ಸವ ಹಿನ್ನೆಲೆ: ಕನ್ನಡ ಪುಸ್ತಕ ಶೇ.50 ರಿಯಾಯಿತಿಯಲ್ಲಿ ಮಾರಾಟ
ಬೆಂಗಳೂರು, ನ.2: ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.30ರವೆಗೆ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿರುವ ಎಲ್ಲ ಪುಸ್ತಕಗಳನ್ನು ಶೇ. 50 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.
ಪುಸ್ತಕಗಳನ್ನು ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ, ರವೀಂದ್ರ ಕಲಾಕ್ಷೇತ್ರದ ಆವರಣ ಜೆ.ಸಿ. ರಸ್ತೆ, ಬೆಂಗಳೂರು ಇಲ್ಲಿ ಹಾಗೂ ಆನ್‌ಲೈನ್ ಮೂಲಕ www.kannadapustakapradhikara.com ನಲ್ಲಿ ಖರೀದಿಸಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ದೂ.080-22484516/ 22107704/05 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Next Story





