Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಧೀಜಿಯ ಅಹಿಂಸೆಯಿಂದ ಸ್ವಾತಂತ್ರ್ಯ...

ಗಾಂಧೀಜಿಯ ಅಹಿಂಸೆಯಿಂದ ಸ್ವಾತಂತ್ರ್ಯ ಬಂತು ಎನ್ನುವ ಕತೆ ಸೃಷ್ಟಿಸಲಾಗಿದೆ: ಡಾ. ಎಸ್.ಎಲ್.ಭೈರಪ್ಪ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ2 Nov 2018 10:33 PM IST
share
ಗಾಂಧೀಜಿಯ ಅಹಿಂಸೆಯಿಂದ ಸ್ವಾತಂತ್ರ್ಯ ಬಂತು ಎನ್ನುವ ಕತೆ ಸೃಷ್ಟಿಸಲಾಗಿದೆ: ಡಾ. ಎಸ್.ಎಲ್.ಭೈರಪ್ಪ

ಬಂಟ್ವಾಳ, ನ. 2: ಗಾಂಧೀಜಿಯ ಅಹಿಂಸೆಯಿಂದ ಸ್ವಾತಂತ್ರ್ಯ ಬಂತು ಎನ್ನುವ ಕತೆ ಸೃಷ್ಟಿಸಲಾಗಿದೆ. ಬ್ರಿಟಿಷರು ಕೇವಲ ಅಹಿಂಸೆಯಿಂದಾಗಿ ಭಾರತವನ್ನು ಬಿಟ್ಟು ಹೋಗಿಲ್ಲ. ಸಿಪಾಯಿ ದಂಗೆ ಮಾದರಿಯಲ್ಲಿ ನಡೆದ ದಂಗೆಗೆ ಹೆದರಿ ಓಡಿದ್ದಾರೆ ಎಂದು ಕಾದಂಬರಿಕಾರ, ಸರಸ್ವತಿ ಸಮ್ಮಾನ ಪುರಸ್ಕೃತ, ಪದ್ಮಶ್ರೀ ಡಾ. ಎಸ್.ಎಲ್. ಭೈರಪ್ಪ ಅವರು ಹೇಳಿದ್ದಾರೆ.

ಶುಕ್ರವಾರ ಸಂಜೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದ ಅವರು ಶಾಲೆಯ ಶೈಕ್ಷಣಿಕೆ ಚಟುವಟಿಕೆಯನ್ನು ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ನೈತಿಕ ಭಯ ನಮ್ಮೊಳಗಿರಬೇಕು. ಪಠ್ಯೇತರ ಚಟುವಟಿಕೆಗಳ ಮೂಲಕ ನೀತಿ ಬೆಳೆಸಬೇಕು ಎಂದರು.

ಬ್ರಿಟಿಷರು ಯಾವ ತಂತ್ರವನ್ನು ಅನುಸರಿಸಿದರೋ ಅದೇ ತಂತ್ರವನ್ನು ದೇಶದ ಮೊದಲ ಪ್ರಧಾನಿ ಅನುಸರಿಸಿದ್ದಾರೆ. ಈಗ ಕೂಡ ಚುನಾವಣೆಯಲ್ಲಿ ಅದೇ ತಂತ್ರ ನಡೆಸಲಾಗುತ್ತದೆ. ಪ್ರಸ್ತುತ ವಂಶ ಪಾರಂಪರ್ಯದ ರಾಜಕಾರಣವೇ ಮುಂದುವರಿದಿದೆ ಎಂದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ  ಡಾ. ಪ್ರಭಾಕರ ಭಟ್ ಸ್ವಾಗತಿಸಿ, ಪ್ರಸ್ತಾವಿಸಿದರು. ಈ ಸಂದರ್ಭ ಭೈರಪ್ಪ ಅವರನ್ನು ಸನ್ಮಾನಿಸಲಾಯಿತು. ಶಾಲಾ ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್, ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ ವೇದಿಕೆಯಲ್ಲಿದ್ದರು. ಉಪನ್ಯಾಸಕ ಕೃಷ್ಣ ಪ್ರಸಾದ್ ನಿರೂಪಿಸಿದರು.

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಚಟುವಟಿಕೆಯ ಬಗ್ಗೆ ಹಲವು ವರ್ಷದಿಂದ ಕೇಳಿ ತಿಳಿದುಕೊಂಡಿದ್ದೆ. ಆದರೆ, ಕಳೆದ ವರ್ಷ ದೇವಸ್ಥಾನವೊಂದರಿಂದ ಶಾಲೆಗೆ ಊಟ ನಿಲ್ಲಿಸಿದ ವಿಚಾರದಿಂದ ಶಾಲೆಯ ಬಗ್ಗೆ ಪತ್ರಿಕೆ ಮೂಲಕ ಮತ್ತಷ್ಟು ತಿಳಿಯಿತು. ಆದರೆ, ಆಗಿನ ಮುಖ್ಯಮಂತ್ರಿ ಅವರು ಯಾಕೆ ಊಟ ನಿಲ್ಲಿಸಿದರು ಎಂದು ಗೊತ್ತಾಗಿರಲಿಲ್ಲ. ಇಂದು ಶಾಲೆಯ ಶೈಕ್ಷಣಿಕ ಚಟುವಟಿಕೆ ಹಾಗೂ ಮಕ್ಕಳಿಗೆ ಕಲಿಸಿಕೊಡುವ ಶಿಕ್ಷಣ, ಸಂಸ್ಕಾರವನ್ನು ಪ್ರತ್ಯಕ್ಷ ಕಂಡಾಗ ಸರಕಾರದ ಊಟ ಇಲ್ಲಿನ ಮಕ್ಕಳಿಗೆ ಯಾಕೆ ನಿಲ್ಲಿಸಿದರು ಎಂದು ಈಗ ನನಗೆ ಅರ್ಥವಾಯಿತು  ಎಂದು ಭೈರಪ್ಪ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X