Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಪಿಯು ಕಾಲೇಜುಗಳ...

ಮಂಗಳೂರು: ಪಿಯು ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ2 Nov 2018 11:41 PM IST
share
ಮಂಗಳೂರು:  ಪಿಯು ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು, ನ.2: ದ.ಕ. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಕಾಸ್ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ2018-19ರ ಮಂಗಳೂರು ತಾಲೂಕು ಮಟ್ಟದ (ನಗರ) ಅಂತರ್ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.

ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್ಸೆನ್ನೆಲ್)ಮಂಗಳೂರು ಇದರ ಹಿರಿಯ ಕ್ರೀಡಾ ಸಹಾಯಕ ಹಾಗೂ ಆಟಮ್ನ್ ಫಿಟ್ನೆಸ್‌ನ ವ್ಯವಸ್ಥಾಪಕ ಸಲಹೆಗಾರ ವಿಕಾಸ್ ಎಂ. ಪುತ್ರನ್ ವಿಕಾಸ್ ಕಾಲೇಜಿನ ರಾಷ್ಟ್ರ ಹಾಗೂ ರಾಜ್ಯಮಟ್ಟದ ಕ್ರೀಡಾಪಟುಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿ ಕ್ರೀಡಾಕೂಟ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕ್ರೀಡೆ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇಂತಹ ಕ್ರೀಡೆಗೆ ಹಿಂದಿನ ಕಾಲದಲ್ಲಿ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿರಲಿಲ್ಲ. ಇಂದಿನ ದಿನಗಳಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುತ್ತಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಲ್ಲೆಲ್ಲಾ ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಕಾಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಯುವ ಸಮುದಾಯ ಈ ದೇಶದ ಸಂಪತ್ತು. ಇಲ್ಲಿನ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿಯೂ ರಾರಾಜಿಸಬೇಕು. ಸಾಮಾನ್ಯ ವಿದ್ಯಾರ್ಥಿಗೂ ಸಾಕಷ್ಟು ಪ್ರೋತ್ಸಾಹ ದೊರೆತು ಎಲ್ಲ ಕ್ಷೇತ್ರದಲ್ಲಿ ಮಿಂಚುವಂತಾಗಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ್ತಿ ಧನ್ಯಶ್ರೀ ಅವರನ್ನು ಸನ್ಮಾನಿಸಲಾಯಿತು.

ವಿಕಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಜೆ.ಕೊರಗಪ್ಪ, ಸೂರಜ್ ಕಲ್ಯ, ವಿಕಾಸ್ ಎಜೂ ಸೊಲ್ಯುಷನ್ ನಿರ್ದೇಶಕ ಡಾ.ಅನಂತ್‌ಪ್ರಭು ಜಿ., ವಿಕಾಸ್ ಸಮೂಹ ಸಂಸ್ಥೆಯ ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೆಮಾರ್, ಕಾಮರ್ಸ್ ಇನ್‌ಚಾರ್ಜ್ ಐಶ್ವರ್ಯ ರಾವ್, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ ಉಪಸ್ಥಿತರಿದ್ದರು.

ವಿಕಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಟಿ. ರಾಜಾರಾಮ್ ರಾವ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಅಜಿತ್ ರೈ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X