Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ದಿ ಐಡಿಯಾ ಆಫ್ ಭಾರತ್' ಮಂಗಳೂರು ಲಿಟ್...

'ದಿ ಐಡಿಯಾ ಆಫ್ ಭಾರತ್' ಮಂಗಳೂರು ಲಿಟ್ ಫೆಸ್ಟ್ ಆರಂಭ

ವಾರ್ತಾಭಾರತಿವಾರ್ತಾಭಾರತಿ3 Nov 2018 3:05 PM IST
share
ದಿ ಐಡಿಯಾ ಆಫ್ ಭಾರತ್ ಮಂಗಳೂರು ಲಿಟ್ ಫೆಸ್ಟ್ ಆರಂಭ

ಮಂಗಳೂರು, ನ. 3: 'ದಿ ಐಡಿಯಾ ಆಫ್ ಭಾರತ್' ಎನ್ನುವ ಪರಿಕಲ್ಪನೆಯೊಂದಿಗೆ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರ ಮಟ್ಟದ ಸಾಹಿತ್ಯ ಉತ್ಸವ 'ಮಂಗಳೂರು ಲಿಟ್ ಫೆಸ್ಟ್' ಶನಿವಾರ ಡಾ. ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ಚಾಲನೆಗೊಂಡಿತು.

ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಡಾ. ವಿನಯ್ ಹೆಗ್ಡೆ, ಆರ್ಗನೈಸರ್ ನ ಪ್ರೊ. ಪ್ರಫುಲ್ಲ ಕೇತ್ಕರ್ ಮತ್ತು ಪತ್ರಕರ್ತೆ ಸಂಧ್ಯಾ ಪೈ ಅವರು ಪ್ರತಿಷ್ಠಿತ ಸಾಹಿತ್ಯ ಹಬ್ಬವನ್ನು ಉದ್ಘಾಟಿಸಿದರು.

ಡಾ. ವಿನಯ್ ಹೆಗ್ಡೆ ಅವರು ಮಾತನಾಡುತ್ತಾ, ಭಾರತ ನಿರ್ಮಾಣಕ್ಕೆ ನಮ್ಮ ಭಾಷೆ, ಧರ್ಮ, ಶಿಕ್ಷಣ ಅಡ್ಡಿಯಾಗಬಾರದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭವ್ಯ ಭಾರತ ನಿರ್ಮಿಸಲು ಅವಕಾಶವಿದೆ. ಅದನ್ನು ಶಾಂತಿಯುತ ಮಾರ್ಗದಲ್ಲಿ ಸಾಧಿಸೋಣ, ಪ್ರಚೋದನಕಾರಿ ಭಾಷಣಗಳು ಇನ್ನೊಬ್ಬರ ಸುಖ, ಸಂತೋಷಕ್ಕೆ ಅಡಿಪಡಿಸಬೇಕಾಗಿಲ್ಲ. ಎಲ್ಲರೂ ಸುಖ, ಸಂತೋಷ, ನೆಮ್ಮದಿಯಿಂದ ಬದುಕಬೇಕೆನ್ನುವುದು ನಮ್ಮ ಗುರಿಯಾಗ ಬೇಕಾಗಿದೆ. ಶ್ರೀ ರಾಮಚಂದ್ರನ ಆದರ್ಶ ಗಳು ನಮಗೆ ಮಾದರಿಯಾಗಬೇಕಾಗಿದೆ. ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಜಾತಿ, ಮತ, ಧರ್ಮದ ಹೆಸರಿನಲ್ಲಿ ತಾರತಮ್ಯ ಧೋರಣೆ ಸಲ್ಲದು. ಮಂಗಳೂರು ನಗರ ದೇಶಕ್ಕೇ ಮಾದರಿಯಾದ ನಗರವಾಗಿದೆ. ಈ ದೇಶದಲ್ಲಿ ಜನಿಸಿರುವುದಕ್ಕೆ ಹೆಮ್ಮೆಯಿದೆ ಎಂದರು.

ಶಬರಿಮಲೆಯ ವಿಚಾರವನ್ನು ಪ್ರಸ್ತಾಪಿಸಿದ ವಿನಯ ಹೆಗ್ಡೆ ಈ ವಿಚಾರದಲ್ಲಿ ನ್ಯಾಯಾಲಯಗಳು ಜನರ ಧಾರ್ಮಿಕ ಭಾವನೆಗಳಿಗೆ ಮನ್ನಣೆ ನೀಡಬೇಕು. ಇದರಲ್ಲಿ ರಾಜಕೀಯವನ್ನು ದೂರ ಇಡಬೇಕು. ದೇಶದಲ್ಲಿ ಎಲ್ಲರಿಗೂ ಆದರ್ಶವಾಗಿರುವ ಪುರುಷೋತ್ತಮನ ದೇವಾಲಯವನ್ನು ನಿರ್ಮಿಸುವುದಕ್ಕೂ ವಿರೋಧ ವ್ಯಕ್ತವಾಗುತ್ತಿರುವುದು ಬೇಸರದ ಸಂಗತಿ ಎಂದ ಅವರು ಜನರ ನಂಬಿಕೆ, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನ ಚಲಾವಣೆಯ ಸಂದರ್ಭದಲ್ಲಿ ನ್ಯಾಯಾಲಯಗಳು ಮೂಗು ತೂರಿಸಬಾರದು, ರಾಜಕೀಯದಲ್ಲಿ ಧಾರ್ಮಿಕ ವಿಷಯಗಳನ್ನು ತರಬಾರದು. ಧಾರ್ಮಿಕ ವಿಚಾರಗಳಲ್ಲಿ ರಾಜಕೀಯದ ಮಧ್ಯೆ ಪ್ರವೇಶಿಸಬಾರದು.  ಆದರೆ ಅವೆಲ್ಲವೂ ದೇಶದಲ್ಲಿ ಈಗ ನಡೆಯುತ್ತಿರುವುದನ್ನು ಕಂಡಾಗ ನಿಜಕ್ಕೂ ಖೇದಕವಾಗುತ್ತದೆ ಎಂದರು.

ಸಂಧ್ಯಾ ಪೈ ಮಾತನಾಡುತ್ತಾ ಭಾರತ ಪ್ರಪಂಚದ ಯಾವ ನಾಗರೀಕತೆಯೂ ಸಾಧಿಸದಷ್ಟು ಸಾಧಿಸಿದೆ. ನಮಗೇ ತಿಳಿಯದ ಇತಿಹಾಸ ಮತ್ತು ಜ್ಞಾನ ಇಲ್ಲಿದೆ. ಆದರೆ ಅವುಗಳನ್ನು ನಮ್ಮ‌ ಮುಂದಿನ ಜನಾಂಗಕ್ಕೆ ತಿಳಿಸುವ ಕೆಲಸವಾಗಬೇಕಿದೆ ಎಂದು ವಿಶ್ಲೇಷಿಸಿದರು.

ಭಾರತ ಎಂದರೆ ತೇಜಸ್ಸು ಮತ್ತು ಅರಿವು ಎನ್ನುವ ಪರಿಕಲ್ಪನೆಯೊಂದಿಗೆ ನಮ್ಮ ಹಿರಿಯರು ಭಾರತವನ್ನು ಕಟ್ಟಿದ್ದರು. ನಾವು ಕಳೆದುಕೊಂಡ ಅದೇ ತೇಜಸ್ಸು ಮತ್ತು ಅರಿವನ್ನು ಈ ಮೂಲಕ ಮತ್ತೊಮ್ಮೆ ಪಡೆಯೋಣ ಎಂದರು.

ಆರ್ಗನೈಸರ್ ಪತ್ರಿಕೆಯ ಸಂಪಾದಕ ಪ್ರೊ. ಪ್ರಫುಲ್ಲ ಕೇತ್ಕರ್ ಅವರು ಮಾತನಾಡಿ "ನಮ್ಮ ಅನುಭವ ಮತ್ತು ಅನುಭೂತಿಯೇ ಭಾರತ" ಎಂದು ಭಾರತದ ಬಗೆಗಿನ ತಮ್ಮ ಪರಿಕಲ್ಪನೆಯನ್ನು ವ್ಯಾಖ್ಯಾನಿಸಿದರು. ಇತ್ತೀಚಿಗೆ ಭಾರತ ಜಾಗತಿಕವಾಗಿ ಗುರುತಿಸಿಕೊಳ್ಳುತ್ತಿದೆ. ವಿಶ್ವಸಂಸ್ಥೆ ಸೇರಿದಂತೆ ಯಾವುದೇ ಅಂತಾರಾಷ್ಟ್ರೀಯ ಚುನಾವಣೆಗಳಲ್ಲೂ ಸೋತಿಲ್ಲ ಎನ್ನುವುದನ್ನು ಸ್ಮರಿಸಿದರು. ಭಾರತೀಯ ಧರ್ಮ ಪರಿಕಲ್ಪನೆಯನ್ನು ಇತರ ಧರ್ಮಗಳಿಗಿಂತಲೂ ಕೆಳಗಿಡುವಲ್ಲಿ ವಸಾಹತುಶಾಹಿ ವ್ಯವಸ್ಥೆಯಲ್ಲೇ ಓದಿ ಬೆಳೆದ ಬಹುತೇಕ ಬೌದ್ಧಿಕರ ಪ್ರಭಾವವಿದೆ ಎಂದರು.

ಆಧ್ಯಾತ್ಮಿಕ ತಳಹದಿಯ ಡೆಮಾಕ್ರಸಿಯನ್ನು ಪ್ರಪಂಚಕ್ಕೆ ನೀಡಿದ್ದೇ ಭಾರತ ಎನ್ನುವುದನ್ನು ತಿಳಿಸಿದ ಅವರು ಬೇರೆ ಬೇರೆ ಕಾರಣಗಳಿಗಾಗಿ ಇತರ ಧರ್ಮೀಯರು ಭಾರತಕ್ಕೆ ಕಾಲಿಟ್ಟಾಗ ಭಾರತೀಯ ರಾಜರುಗಳು ಅವರ ರೀತಿ ರಿವಾಜುಗಳಿಗನುಗುಣವಾಗಿ ಪ್ರಾರ್ಥಿಸಲು ಜಾಗಗಳನ್ನೊದಗಿಸಿದರು, ಪ್ರಾರ್ಥನಾ ಮಂದಿರಗಳನ್ನು ನಿರ್ಮಿಸಿಕೊಟ್ಟರು ಎಂದು ಅವರು ಹೇಳಿದರು.

ಸ್ಮಿತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X