ಲಂಚ ನೀಡುವುದು ಕೂಡ ಅಪರಾಧ: ಜಯರಾಮ್ ಗೌಡ

ಉಡುಪಿ, ನ.3: ಲಂಚ ಸ್ವೀಕರಿಸುವುದು ಮಾತ್ರವಲ್ಲ, ಲಂಚ ನೀಡುವುದು ಕೂಡ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಜಯರಾಮ್ ಡಿ.ಗೌಡ ಹೇಳಿದ್ದಾರೆ.
ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಭ್ರಷ್ಟಾಚಾರ ನಿಗ್ರಹದಳ ಉಡುಪಿ ಪೊಲೀಸ್ ಠಾಣೆಯ ಸಹಯೋಗದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಲಾದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಸಪ್ತಾಹದ ಪ್ರಯುಕ್ತ ಕಾರ್ಯ ಕ್ರಮವನ್ನುದ್ದೇಶಿಸಿ ಅವರು ಮಾತನಾಡುತಿದ್ದರು.
ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ವೃತ್ತ ನಿರೀಕ್ಷಕ ಸತೀಶ್ ಬಿ.ಎಸ್. ಮಾತನಾಡಿದರು. ಈ ಸಂದರ್ಭದಲ್ಲಿ 185ಕ್ಕೂ ಅಧಿಕ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ವಹಿಸಿದ್ದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ್ ಭಂಡಾರಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ಉಮೇಶ್ ಮಯ್ಯ ಕಾರ್ಯಕ್ರಮ ಸಂಯೋಜಿಸಿದರು. ಡಾ.ಶ್ರೀಧರ್ ಪ್ರಸಾದ್ ವಂದಿಸಿ ದರು. ಉಪನ್ಯಾಸಕ ಡಾ.ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು.







