ಕುಮಾರಸ್ವಾಮಿ ವಿರುದ್ಧದ ಹೇಳಿಕೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಶಾಸಕ ಕುಮಾರ ಬಂಗಾರಪ್ಪ

ಸೊರಬ,ನ.3: ದೇಶದ ಸಮಗ್ರ ಅಭಿವೃಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆ ಹಾಗೂ ಜಿಲ್ಲೆಯ ಅಭಿವೃಧಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡ್ಡಿಯೂರಪ್ಪ ಅವರ ಅಪಾರ ಕೊಡುಗೆ ಇರುವುದರಿಂದ ಲೋಕಸಭೆ ಉಪ ಚುನಾವಣೆಯ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸಹಜವಾಗಿ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಕುಮಾರ ಬಂಗಾರಪ್ಪ ತಿಳಿಸಿದರು.
ಶನಿವಾರ ಕುಬಟೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ತಮ್ಮ ಪತ್ನಿ ಮತ್ತು ಮಗ, ಮಗಳೊಂದಿಗೆ ಮತದಾನ ಮಾಡಿದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು.
ನಾನು ರಾಜ್ಯ ಸರ್ಕಾರದ ವಿರುದ್ಧವಾಗಿ ಅಥವಾ ಯಾರದೇ ವಿರುದ್ಧ ಮಾತನಾಡಿದರೂ ಸರಿಯಾಗಿ ಅಲೋಚನೆ ಮಾಡಿ ಹೇಳಿಕೆ ನೀಡುತ್ತೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆಡಿದ ಮಾತುಗಳಲ್ಲಿ ಯಾವುದೇ ತಪ್ಪಿಲ್ಲ. ಹೇಳಿಕೆ ಹಿಂಪಡೆಯುವ ಪ್ರಶ್ನೆಯೆ ಇಲ್ಲ ಎಂದರು.
ಚಿತ್ರರಂಗದ ಹಿನ್ನಲೆಯಿರುವ ನಾನು ಡಾ.ರಾಜ್ ಕುಮಾರ್ ಅವರ ವ್ಯಕ್ತಿತ್ವ ಅವಳಡಿಸಿಕೊಂಡಿದ್ದೇನೆ. ಅವರಂತೆ ಪ್ರಾಮಾಣಿಕವಾಗಿ ಹೆಜ್ಜೆಗಳನ್ನು ಇಡುತ್ತಿದ್ದೇನೆ ಎಂದರು.





