Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಲೋಕಸಭಾ ಉಪ ಚುನಾವಣೆ...

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಶಾಂತಿಯುತ: ಮತಯಂತ್ರದಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ವಾರ್ತಾಭಾರತಿವಾರ್ತಾಭಾರತಿ3 Nov 2018 10:34 PM IST
share
ಶಿವಮೊಗ್ಗ ಲೋಕಸಭಾ ಉಪ ಚುನಾವಣೆ ಶಾಂತಿಯುತ: ಮತಯಂತ್ರದಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಶಿವಮೊಗ್ಗ, ನ.3: ರಾಜ್ಯ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿರುವ, ಬಿಜೆಪಿ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗಿರುವ, ರಾಷ್ಟ್ರ-ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಶನಿವಾರ ನಡೆದ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿ ಪೂರ್ಣಗೊಂಡಿತು.  

ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ನ. 6 ರಂದು ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜು ಕಟ್ಟಡದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಯಾರಿಗೆ ವಿಜಯ ಮಾಲೆ ಬೀಳಲಿದೆ ಎಂಬುವುದು ಗೊತ್ತಾಗಲಿದ್ದು, ಸಾಕಷ್ಟು ಕುತೂಹಲ ಕೆರಳುವಂತೆ ಮಾಡಿದೆ. 

ನೀರಸ-ಬಿರುಸು: ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ ಮತದಾನ ಪ್ರಕ್ರಿಯೆ ನೀರಸವಾಗಿತ್ತು. ಕೆಲ ಮತಗಟ್ಟೆಗಳಲ್ಲಿ ಮತದಾರರಿಗಾಗಿ ಸಿಬ್ಬಂದಿಗಳು ಕಾದು ಕುಳಿತುಕೊಳ್ಳುವಂತಹ ಸ್ಥಿತಿಯಿತ್ತು. ಬಿಸಿಲು ಏರುತ್ತಿದ್ದಂತೆ ಮತದಾನ ಪ್ರಕ್ರಿಯೆ ಕೂಡ ಚುರುಕುಗೊಳ್ಳಲಾರಂಭಿಸಿತು. ನಗರ-ಪಟ್ಟಣ, ಗ್ರಾಮೀಣ ಭಾಗಗಳಲ್ಲಿ ಅತ್ಯಂತ ಉತ್ಸಾಹದಿಂದ ಮತದಾರರು ತಮ್ಮ ಹಕ್ಕು ಚಲಾಯಿಸಲು ಆಗಮಿಸುತ್ತಿದ್ದ ದೃಶ್ಯ ಕಂಡುಬಂತು.

ಬೆಳಿಗ್ಗೆ 9 ಗಂಟೆಗೆ ಶೇ. 8.48, 11 ಗಂಟೆಗೆ ಶೇ. 21.78, ಮಧ್ಯಾಹ್ನ 1 ಗಂಟೆಗೆ ಶೇ. 35.99, 3 ಗಂಟೆಗೆ ಶೇ. 47 ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯ ವೇಳೆಗೆ ಸೊರಬ, ಶಿಕಾರಿಪುರ, ಶಿವಮೊಗ್ಗ ಗ್ರಾಮಾಂತರದಲ್ಲಿ ಮತದಾನದ ಪ್ರಮಾಣ ಶೇ. 50 ರಷ್ಟು, ತೀರ್ಥಹಳ್ಳಿ, ಸಾಗರ, ಬೈಂದೂರು ಕ್ಷೇತ್ರಗಳಲ್ಲಿ ಶೇ. 40 ರ ಗಡಿ ದಾಟಿತ್ತು. ಆದರೆ ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕುಗಳಲ್ಲಿ ಕ್ರಮವಾಗಿ ಶೇ. 36.05, ಶೇ. 38.69 ರಷ್ಟೇ ಮತದಾನವಾಗಿತ್ತು. 

ಶಿವಮೊಗ್ಗ ಹಾಗೂ ಭದ್ರಾವತಿ ಹೊರತುಪಡಿಸಿದರೆ, ಉಳಿದ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದೆ. ಶಿವಮೊಗ್ಗ ನಗರದ ಹಲವು ಮತಗಟ್ಟೆಗಳಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂದಿತು. ಅದರಲ್ಲಿಯೂ ಪ್ರತಿಷ್ಠಿತ ಏರಿಯಾಗಳ ಮತಗಟ್ಟೆಗಳಲ್ಲಿ ಮತದಾನದ ನೀರಸವಾಗಿದ್ದುದು ಕಂಡುಬಂದಿತು.

ಸಮಸ್ಯೆಗೆ ಪರಿಹಾರ: ಮೂಲಸೌಕರ್ಯಕ್ಕೆ ಆಗ್ರಹಿಸಿ ಶಿವಮೊಗ್ಗ ತಾಲೂಕಿನ ದೊಡ್ಡಮಟ್ಟಿ ಹಾಗೂ ಭದ್ರಾವತಿಯ ಹೊಳೆಬೆಳಗಲು ಗ್ರಾಮಸ್ಥರು ಮತದಾನ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದರು. ಮತದಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ನಂತರ ಮತದಾನ ಕಾರ್ಯದಲ್ಲಿ ಗ್ರಾಮಸ್ಥರು ಭಾಗಿಯಾದರು. ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಳಗುಪ್ಪದಲ್ಲಿ ವಿವಿ ಪ್ಯಾಟ್ ಸಮಸ್ಯೆಯಿಂದ ಕೆಲ ಸಮಯ ಮತದಾನ ಪ್ರಕ್ರಿಯೆ ಸ್ಥಗಿತಗೊಂಡಿತ್ತು. 

ಸಕಲ ವ್ಯವಸ್ಥೆ: ಬೆಳಿಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿಯನ್ನು ಹಾಕಲಾಯಿತು. ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ನಿರ್ಬಂಧಿಸಲಾಗಿತ್ತು. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ ಆಯೋಗ ನಿಗದಿಪಡಿಸಿದ್ದ ಇತರೆ 12 ಭಾವಚಿತ್ರವಿರುವ ಗುರುತಿನ ಚೀಟಿಗಳಲ್ಲಿ ಯಾವುದಾದರು ಒಂದನ್ನು ತೋರಿಸಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. 

ಸುಗಮ-ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಆಯೋಗವು ವ್ಯಾಪಕ ಕ್ರಮಕೈಗೊಂಡಿತ್ತು. ಸುಮಾರು 20 ಸಾವಿರದಷ್ಟು ಅಧಿಕಾರಿ-ಸಿಬ್ಬಂದಿಗಳನ್ನು ನಿಯೋಜಿಸಿತ್ತು. ಮತಗಟ್ಟೆಗಳಲ್ಲಿ ನೇರವಾಗಿ 11 ಸಾವಿರ ಅಧಿಕಾರಿ-ಸಿಬ್ಬಂದಿ ಕರ್ತವ್ಯ ನಿರ್ವಹಿಸಿದರು. ಚುನಾವಣಾ ಬಂದೋಬಸ್ತಿಗಾಗಿ 4 ಸಾವಿರಕ್ಕೂ ಅಧಿಕ ಪೊಲೀಸರ ಜೊತೆಗೆ ಅರೆಸೇನಾ ಪಡೆ ಸಿಬ್ಬಂದಿಗಳನ್ನು ನೇಮಿಸಲಾಗಿತ್ತು. 

ಮತದಾರರ ವಿವರ: ಲೋಕಸಭಾ ಚುನಾವಣೆಯಲ್ಲಿ ಒಟ್ಟು 16,45,059 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ. ಇವರಲ್ಲಿ 827111 ಮಹಿಳೆಯರು ಹಾಗೂ 817948 ಪುರುಷರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಹೊಸದಾಗಿ 8500 ಮತದಾರರು ಸೇರ್ಪಡೆಯಾಗಿದ್ದಾರೆ. 

ಹಲವೆಡೆ ಹರಿಯಿತು ಹಣದ ಹೊಳೆ!
ಮತದಾನದ ಮುನ್ನಾ ದಿನವಾದ ಶುಕ್ರವಾರ ಕ್ಷೇತ್ರದ ಹಲವೆಡೆ ಹಣದ ಹೊಳೆಯೇ ಹರಿದಿದೆ. ಮತದಾರರಿಗೆ ಹಣದ ಆಮಿಷವೊಡ್ಡಿದ ಮಾಹಿತಿಗಳು ಕೇಳಿ ಬಂದಿದೆ. ಕೆಲವೆಡೆ ಮತದಾರರಿಗೆ ಕನಿಷ್ಠ 100, 200 ರೂ.ಗಳಿಂದ ಗರಿಷ್ಠ 500 ರೂ.ಗಳವರೆಗೆ ಹಂಚಿಕೆ ಮಾಡಲಾಗಿದೆ. ಮದ್ಯ ಕೂಡ ವಿತರಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಶನಿವಾರ ಬೆಳಿಗ್ಗೆ ಕೂಡ ಶಿವಮೊಗ್ಗ ತಾಲೂಕಿನ ಕೆಲ ಗ್ರಾಮೀಣ ಭಾಗಗಳಲ್ಲಿ ಮತದಾರರಿಗೆ ಹಣ ವಿತರಿಸಿದ ಮಾಹಿತಿಗಳು ಕೇಳಿಬಂದಿವೆ. ಒಟ್ಟಾರೆ ಜಿದ್ದಾಜಿದ್ದಿನ ಅಖಾಡ ಏರ್ಪಟ್ಟಿರುವ ಕ್ಷೇತ್ರದಲ್ಲಿ, ಕುರುಡು ಕಾಂಚಾಣದ ನರ್ತನ ಜೋರಾಗಿದ್ದ ವರದಿಗಳು ಬಂದಿವೆ. 

ಪ್ರಮುಖ ನಾಯಕರ ಮತದಾನ
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ವಿಜಯೇಂದ್ರರವರು ಶಿಕಾರಿಪುರ ಪಟ್ಟಣದ ತಾಲೂಕು ಪಂಚಾಯತ್ ಕಚೇರಿ ಕಟ್ಟಡದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪರವರು ಸೊರಬ ತಾಲೂಕಿನ ಕುಬಟೂರು ಗ್ರಾಮದ ಮತಗಟ್ಟೆಯಲ್ಲಿ ಹಾಗೂ ಇದೇ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪರವರು ತಮ್ಮ ಹಕ್ಕು ಚಲಾಯಿಸಿದರು. ಶಿವಮೊಗ್ಗ ನಗರದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ, ಹಿರಿಯ ಮುಖಂಡ ಡಿ.ಹೆಚ್.ಶಂಕರಮೂರ್ತಿ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಆರ್.ಪ್ರಸನ್ನಕುಮಾರ್ ಮತ್ತು ತಾಲೂಕಿನ ಹಸೂಡಿ ಗ್ರಾಮದಲ್ಲಿ ಶಾಸಕ ಅಶೋಕ್‍ ನಾಯ್ಕ್ ರವರು ಮತ ಚಲಾಯಿಸಿದರು. ಉಳಿದಂತೆ ಜಿಲ್ಲೆಯ ವಿವಿಧೆಡೆ ಹಲವು ರಾಜಕಾರಣಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ. ಸೊರಬ ತಾಲೂಕಿನಲ್ಲಿ ಶಾಸಕ ಹಾಲಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ತೀರ್ಥಹಳ್ಳಿ ತಾಲೂಕಿನಲ್ಲಿ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಭದ್ರಾವತಿಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್, ಮಾಜಿ ಶಾಸಕ ಅಪ್ಪಾಜಿಗೌಡರವರು ಮತದಾನ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X