ಶ್ರೀನಗರದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಬಲಿ
ಶ್ರೀನಗರ, ನ.4: ಹಿಝ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಶನಿವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಉಗ್ರರು ನಡುವೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಖುಡ್ಪೋರಾದಲ್ಲಿ ಉಗ್ರರು ಅಡಗಿದ್ದಾರೆಂದು ದೊರೆತ ವರ್ತಮಾನದ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿತ್ತು. ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಆಗ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಇಬ್ಬರು ಉಗ್ರರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಇಬ್ಬರು ಪರಾರಿಯಾಗಿದ್ದಾರೆಂದು ತಿಳಿದು ಬಂದಿದೆ.
ಮೃತಪಟ್ಟವರನ್ನು ಮುಹಮ್ಮದ್ ಇರ್ಫಾನ್ ಬಟ್ ಮತ್ತು ಶಾಹೀದ್ ಮಿರ್ ಎಂದು ತಿಳಿದು ಬಂದಿದೆ. ಇವರು ಕಳೆದ ವರ್ಷ ಉಗ್ರ ಸಂಘನೆಗೆ ಸೇರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Next Story





