Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಟಿಪ್ಪು ಜಯಂತಿ ವೇಳೆ ಕಾನೂನು...

ಟಿಪ್ಪು ಜಯಂತಿ ವೇಳೆ ಕಾನೂನು ಉಲ್ಲಂಘಿಸಿದರೆ ಕ್ರಮ: ಉಪಮುಖ್ಯಮಂತ್ರಿ ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ4 Nov 2018 3:29 PM IST
share
ಟಿಪ್ಪು ಜಯಂತಿ ವೇಳೆ ಕಾನೂನು ಉಲ್ಲಂಘಿಸಿದರೆ ಕ್ರಮ: ಉಪಮುಖ್ಯಮಂತ್ರಿ ಪರಮೇಶ್ವರ್

ಬೆಂಗಳೂರು, ನ. 4: ಟಿಪ್ಪು ಸುಲ್ತಾನ್ ಜಯಂತಿ ನೆಪದಲ್ಲಿ ಬಿಜೆಪಿ ರಾಜ್ಯದಲ್ಲಿ ಕೋಮು ಸೌಹಾರ್ದತೆ ಕದಡಲು ಯತ್ನಿಸುತ್ತಿದ್ದು, ಇದಕ್ಕೆ ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಕಾನೂನು ಸುವ್ಯವಸ್ಥೆಗೆ ಯಾರೇ ಧಕ್ಕೆ ತಂದರೆ ಸಹಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ.

ರವಿವಾರ ಇಲ್ಲಿನ ಸದಾಶಿವನಗರದಲ್ಲಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿಗೆ ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳುವ ಸಂಬಂಧ ಸೋಮವಾರ (ನ.5) ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

ಯಾರೇ ವಿರೋಧ ವ್ಯಕ್ತಪಡಿಸಿದರೂ ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಸರಕಾರದ ವತಿಯಿಂದ ಟಿಪ್ಪು ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದ ಅವರು, ಭದ್ರತೆಗೆ ಕೆಎಸಾರ್ಪಿ, ಸಿಎಆರ್ ಪಡೆಯನ್ನು ಬಳಸಿಕೊಳ್ಳಲಾಗುವುದು ಎಂದರು.

ಬಿಜೆಪಿಯವರು ಅನಗತ್ಯವಾಗಿ ಟಿಪ್ಪುಜಯಂತಿ ಆಚರಣೆಯನ್ನು ವಿರೋಧಿಸುತ್ತಿದ್ದಾರೆ. ಅವರು ಎಷ್ಟೇ ವಿರೋಧಿಸಿದರೂ ಬ್ರಿಟಿಷರ ವಿರುದ್ಧ ಹೋರಾಡಿದ ಟಿಪ್ಪು ಜಯಂತಿಯನ್ನು ಸರಕಾರ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯಿಂದ ಆಚರಣೆ ಮಾಡಲಿದೆ ಎಂದು ಹೇಳಿದರು.

ಟಿಪ್ಪುಜಯಂತಿ ಆಹ್ವಾನ ಪತ್ರಿಕೆಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಪತ್ರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಿಷ್ಟಾಚಾರದ ಪ್ರಕಾರ ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹಾಕಲಾಗಿದೆ. ಬರುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

ಸಂಶೋಧಕ ಡಾ.ಚಿದಾನಂದ ಮೂರ್ತಿಯವರ ಬಗ್ಗೆ ಅಪಾರ ಗೌರವವಿದೆ. ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದ್ದು, ಅದರಂತೆ ಅವರು ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ, ಟಿಪ್ಪುಸುಲ್ತಾನ್ ಜಯಂತಿ ಆಚರಣೆ ವಿಚಾರ ಹಿಂದೆಯೇ ತೀರ್ಮಾನವಾದ್ದರಿಂದ ಅದರಂತೆಯೇ ಮಾಡಲಿದ್ದೇವೆಂದು ಅವರು ಸ್ಪಷ್ಟಪಡಿಸಿದರು.

ಮುಂಬವರು ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಬಿಜೆಪಿ ಮುಖಂಡರು ಟಿಪ್ಪು ಸುಲ್ತಾನ್ ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಈ ಹಿಂದೆ ಬಿಜೆಪಿ ಆಡಳಿತಾವಧಿಯಲ್ಲಿ ಬಿಜೆಪಿ ಮುಖಂಡರೇ ಟಿಪ್ಪು ಜಯಂತಿ ಆಚರಣೆ ಮಾಡಿದ್ದಾರೆ ಎಂದು ಪರಮೇಶ್ವರ್ ಲೇವಡಿ ಮಾಡಿದರು.

ಗೆಲುವು: ಮೂರು ಲೋಕಸಭೆ, ಎರಡು ವಿಧಾನಸಭಾ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲ್ಲುವ ಭರವಸೆ ಇದೆ ಎಂದ ಅವರು, ಆಪರೇಷನ್ ಕಮಲ ಮತ್ತು ಆಮಿಷವೊಡ್ಡುವುದರಲ್ಲಿ ಬಿಜೆಪಿಯವರು ನಿಸ್ಸಿಮರು. ವಾಸ್ತವ ಸ್ಥಿತಿ ಅರಿತ ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ನಮ್ಮ ಪಕ್ಷಕ್ಕೆ ಮರಳಿದ್ದಾರೆ ಎಂದರು.

ದಿಲ್ಲಿ ಮಾದರಿ: ಬೆಳಕಿನ ಹಬ್ಬ ದೀಪಾವಳಿಗೆ ಪಟಾಕಿ ಸಿಡಿಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲಿದ್ದೇವೆ. ಈ ಸಂಬಂಧ ಹೊಸದಿಲ್ಲಿ ಮಾದರಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ಇದೇ ವೇಳೆ ಸ್ಪಷ್ಟಪಡಿಸಿದರು.

‘ಉಪ ಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಮಾಡಲಾಗುವುದು. ನಾನು ಹೊಸದಿಲ್ಲಿಗೆ ಹೋಗುತ್ತಿಲ್ಲ. ಸಚಿವ ಡಿ.ಕೆ.ಶಿವಕುಮಾರ್ ಯಾವ ಕಾರಣಕ್ಕೆ ಹೋಗಿದ್ದಾರೆಂಬುದು ನನಗೆ ಗೊತ್ತಿಲ್ಲ’

-ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X