Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೋರ್ಡಿಂಗ್ಸ್ ಬಗ್ಗೆ ಅಧ್ಯಯನ ವರದಿ ನೀಡಲು...

ಹೋರ್ಡಿಂಗ್ಸ್ ಬಗ್ಗೆ ಅಧ್ಯಯನ ವರದಿ ನೀಡಲು ವಿಳಂಬ ಧೋರಣೆ: ಹೈಕೋರ್ಟ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ4 Nov 2018 7:04 PM IST
share
ಹೋರ್ಡಿಂಗ್ಸ್ ಬಗ್ಗೆ ಅಧ್ಯಯನ ವರದಿ ನೀಡಲು ವಿಳಂಬ ಧೋರಣೆ: ಹೈಕೋರ್ಟ್ ಆಕ್ರೋಶ

ಬೆಂಗಳೂರು, ನ.4: ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಸ್ ಸೇರಿದಂತೆ ಜಾಹೀರಾತುಗಳಿಗೆ ಬಳಸುವ ಪರಿಕರಗಳು ನೆಲದಲ್ಲಿ ಕರಗುವ ತ್ಯಾಜ್ಯ ಗುಣ ಹೊಂದಿವೆಯೋ ಅಥವಾ ಪ್ಲಾಸ್ಟಿಕ್‌ ಯುಕ್ತವಾಗಿಯೋ ಎಂಬುದರ ಬಗ್ಗೆ ಅಧ್ಯಯನ ವರದಿ ನೀಡಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಹೈಕೋರ್ಟ್ ತೀವ್ರ ಅತಪ್ತಿ ವ್ಯಕ್ತಪಡಿಸಿದೆ.

ಈ ಕುರಿತಂತೆ ಕೇಂದ್ರ ಸರಕಾರದ ಸಂಶೋಧನಾ ಸಂಸ್ಥೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮೇಲೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ಎಸ್. ಸುಜಾತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಅಸಮಾಧಾನ ಹೊರ ಹಾಕಿತು.

ಸಹಾಯಕ ಸಾಲಿಸಿಟರ್ ಜನರಲ್ ಸಿ. ಶಶಿಕಾಂತ್ ಅವರು, ಈ ಪ್ರಕರಣದಲ್ಲಿ ಕೇಂದ್ರ ಸರಕಾರವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಹೀಗಾಗಿ, ಪರಿಕರಗಳ ಬಳಕೆ ಕುರಿತಾದ ಸಂಶೋಧನಾ ವರದಿ ನೀಡುವಲ್ಲಿ ಸಂವಹನದ ಕೊರತೆಯಾಗಿದೆ ಎಂದು ಸ್ಪಷ್ಟನೆ ನೀಡಿದರು.

ಅಂತೆಯೇ ಮಾಲಿನ್ಯ ನಿಯಂತ್ರಣ ಮಂಡಳಿ ಪರ ಹಾಜರಿದ್ದ ವಕೀಲ ಗುರುರಾಜ್ ಜೋಶಿ ಅವರು, ಈ ಪರಿಕರಗಳ ಅಧ್ಯಯನ ಮತ್ತು ಸಂಶೋಧನಾ ವರದಿ ನಾಲ್ಕು ವಿವಿಧ ಹಂತಗಳಲ್ಲಿ ನಡೆಯಬೇಕಿದೆ. ಸದ್ಯ, 15 ದಿನಗಳ ಅಧ್ಯಯನ ಪ್ರಕ್ರಿಯೆಗೆ ಒಳಗಾದ ಪರಿಕರಗಳ ಮೇಲಿನ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ವಿವಿಧ ಇಲಾಖೆಗಳ ಸಮನ್ವಯ ಸಮಿತಿಗೆ ಹೈಕೋರ್ಟ್ ಪರವಾಗಿ ಸದಸ್ಯರಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯ ಕುರಿತು ನ್ಯಾಯಪೀಠಕ್ಕೆ ವಿವರಣೆ ನೀಡಿದರು.

ರಾಜಕಾಲುವೆ ನಿರ್ವಹಣೆ ಕುರಿತು ವಿವರಿಸಿದ ಅವರು, ರೋಬೊಟಿಕ್ ಯಂತ್ರಗಳ ಬಳಕೆಗೆ ಬಿಬಿಎಂಪಿ ಪ್ರಸ್ತಾವ ಸಲ್ಲಿಸಿದೆ. ಈ ಕುರಿತು ಸಭೆಯಲ್ಲಿ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದರು.

ಬದ್ಧತೆ ಬೇಕು: ಬೆಂಗಳೂರು ತನ್ನ ಗತವೈಭವವನ್ನು ಮರಳಿ ಪಡೆಯಲೇ ಬೇಕು. ಈ ವಿಷಯದಲ್ಲಿ ಎರಡನೇ ಮಾತೇ ಇಲ್ಲ ಎಂದು ಪುನರುಚ್ಛರಿಸಿದ ಮುಖ್ಯ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ವಿವಿಧ ಸಂಸ್ಥೆಗಳು ನಗರದ ಸ್ವಚ್ಛತೆಗೆ ಸಂಬಂಧಿಸಿದಂತೆ ಕೈ ಜೋಡಿಸಬೇಕು. ಸಾರ್ವಜನಿಕ ಸೇವೆಯ ಕಟಿಬದ್ಧತೆಗೆ ಮಿಗಿಲಾದದ್ದು ಬೇರಾವುದೂ ಇಲ್ಲ ಎಂದರು. ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X