ನ.7ಕ್ಕೆ ಆಕ್ಸಿಸ್ ಬ್ಯಾಂಕ್-ರೈತರ ಜೊತೆ ಜಿಲ್ಲಾಧಿಕಾರಿ ಸಭೆ
ಬೆಂಗಳೂರು, ನ. 5: ಬೆಳಗಾವಿ ಜಿಲ್ಲೆಯ ರೈತರಿಗೆ ಆಕ್ಸಿಸ್ ಬ್ಯಾಂಕ್ ಕೋಲ್ಕತ್ತಾ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದು, ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿರುವ ಸಂಬಂಧ, ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದಾರೆ.
ರೈತರು ಹಾಗೂ ಆಕ್ಸಿಸ್ ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು ಅದರಂತೆ ಜಿಲ್ಲಾಧಿಕಾರಿಗಳು ನ.7ರಂದು ಬ್ಯಾಂಕ್ ಅಧಿಕಾರಿಗಳು, ರೈತರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಲಾಗಿದೆ.
ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಬ್ಯಾಂಕಿನ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌಹಾರ್ದಯುತವಾಗಿ ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





