Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇಗದ ಹಿನ್ನೀರು ನೌಕಾಸೇವೆಗೆ ಚಾಲನೆ...

ವೇಗದ ಹಿನ್ನೀರು ನೌಕಾಸೇವೆಗೆ ಚಾಲನೆ ನೀಡಿದ ಕೇರಳ

ಎರ್ನಾಕುಲಂ, ಕೊಟ್ಟಾಯಂ, ಅಲಪ್ಪುಳ ಜಿಲ್ಲೆಗಳಿಗೆ ಜಲಮಾರ್ಗದ ಸಂಪರ್ಕ

ವಾರ್ತಾಭಾರತಿವಾರ್ತಾಭಾರತಿ5 Nov 2018 9:58 PM IST
share
ವೇಗದ ಹಿನ್ನೀರು ನೌಕಾಸೇವೆಗೆ ಚಾಲನೆ ನೀಡಿದ ಕೇರಳ

ತಿರುವನಂತಪುರಂ,ನ.5: ರಾಜ್ಯದ ಅತ್ಯಂತ ವೇಗದ ಹಿನ್ನೀರು ನೌಕಾಯಾನ ಸೇವೆ ‘ವೇಗಾ 120’ಯನ್ನು ಕೇರಳ ಸರಕಾರವು ಸೋಮವಾರ ಆರಂಭಿಸಿದೆ. ಈ ನೌಕಾಸೇವೆಯು ಎರ್ನಾಕುಲಂ, ಕೊಟ್ಟಾಯಂ ಹಾಗೂ ಅಲಪ್ಪುಳ ಜಿಲ್ಲೆಗಳನ್ನು ಸಂಪರ್ಕಿಸಲಿದೆ. ‘ತಾಸಿಗೆ 25 ಕಿ.ಮೀ.ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರುವ ಈ ನೌಕೆಯು ಎರ್ನಾಕುಲಂ ಹಾಗೂ ವೈಕಂ ನಗರಗಳ ನಡುವಿನ ಪ್ರಯಾಣದ ಅವಧಿಯನ್ನು 90 ನಿಮಿಷಗಳಷ್ಟು ಕಡಿಮೆಗೊಳಿಸಲಿದೆ.

   ಈತನಕ, ಕೇರಳದ ಹಿನ್ನೀರಿನಲ್ಲಿ ಕಾರ್ಯನಿರ್ವಹಿಸುವ ನೌಕೆಗಳು ತಾಸಿಗೆ ಗರಿಷ್ಠ 14 ಕಿ.ಮೀ. ವೇಗದವರೆಗೆ ಮಾತ್ರ ಸಂಚರಿಸುವ ಸಾಮರ್ಥ್ಯವನ್ನು ಪಡೆದಿವೆ. ಭಾಗಶಃ ಹವಾನಿಯಂತ್ರಿತವಾಗಿರುವ ಈ ನೌಕೆಯು ನದಿಮಾರ್ಗಗಳ ಮೂಲಕ ನಿತ್ಯವೂ ಸಂಚರಿಸುವ ಜನಸಾಮಾನ್ಯರಿಗೆ ಭಾರೀ ಪ್ರಯೋಜನಕಾರಿಯಾಗಿದೆ. ಈ ಫೆರ್ರಿ ನೌಕೆಯ ಸೇವೆಯು, ಫೀಡರ್ ದೋಣಿಗಳ ಮೂಲಕ ಇತರ ಪ್ರಮುಖ ಕೇಂದ್ರಗಳನ್ನು ಸಂಪರ್ಕಿಸಲಿದೆ.

 ಕೇರಳ ಜಲ ಸಾರಿಗೆ ಇಲಾಖೆಯ ಮಾಲಕತ್ವದ ಈ ಫೆರ್ರಿ ನೌಕೆಯು ಹವಾನಿಯಂತ್ರಿತ ಕ್ಯಾಬಿನ್‌ನಲ್ಲಿ 40 ಮಂದಿ ಹಾಗೂ ಸಾಮಾನ್ಯ ಕ್ಯಾಬಿನ್‌ನಲ್ಲಿ 80 ಮಂದಿಯಂತೆ ಒಟ್ಟು 120 ಪ್ರಯಾಣಿಕರನ್ನು ಏಕಕಾಲದಲ್ಲಿ ಕೊಂಡೊಯ್ಯಬಲ್ಲದು.

‘ನವಗತಿ ಮೆರೈನ್ ಡಿಸೈನ್ ಆ್ಯಂಡ್ ಕನ್ಸ್‌ಟ್ರಕ್ಷನ್ ಏಜೆನ್ಸಿ ’ ನಿರ್ಮಿಸಿರುವ ಈ ನೌಕೆಯು ಅತ್ಯುತ್ಕೃಷ್ಟವಾದ ಸುರಕ್ಷತಾ ಮಾನದಂಡಗಳನ್ನು ಹೊಂದಿದೆ. ನೌಕೆಯು ಅಗ್ನಿನಿರೋಧಕ ವ್ಯವಸ್ಥೆಯಿಂದ ಸುಸಜ್ಜಿತವಾಗಿದ್ದು, ಎಂಜಿನ್ ಕೊಠಡಿಯು ಸಂಪೂರ್ಣವಾಗಿ ಇನ್ಸುಲೇಟೆಡ್‌ಯುಕ್ತವಾಗಿದೆ.ಯಾವುದೇ ಸಂಭಾವ್ಯ ಅಗ್ನಿಅನಾಹುತದಿಂ ರಕ್ಷಣೆ ಪಡೆಯಲು ಆದರ ಹೊರಹೊದಿಕೆ ಹಾಗೂ ಒಳಭಾಗದ ಮೇಲಂತಸ್ತಿಗೆ, ಅಗ್ನಿನಿರೋಧಕ ರೆಸಿನ್ ಲೇಪಿಸಲಾಗಿದೆ.

 ಹಿನ್ನೀರ ದೋಣಿಯಾನಕ್ಕೆ ಹೆಸರುವಾಸಿಯಾಗಿರುವ ಕೇರಳದಲ್ಲಿ 41 ನದಿಗಳು ಪಶ್ಚಿಮಾಭಿಮುಖವಾಗಿ ಹರಿಯುತ್ತಿವೆ. 1895 ಕಿ.ಮೀ.ವರೆಗೂ ಹರಿಯುವ ಈ ನದಿಗಳು, ಕೇರಳದ ಒಳನಾಡಿನ ಸಾರಿಗೆ ವ್ಯವಸ್ಥೆಯ ಪ್ರಮುಖ ಭಾಗವಾಗಿ ಪರಿಣಮಿಸಿದೆ.

  . ವಾಯು, ನೆಲ ಹಾಗೂ ಜಲ ಮಾರ್ಗಗಳನ್ನು ಪರಸ್ಪರ ಸಂಪರ್ಕಿಸುವ ತನ್ನ ಯೋಜನೆಯ ಅಂಗವಾಗಿ ಕೇರಳ ಸರಕಾರವು ಇತ್ತೀಚೆಗೆ ರಾಜ್ಯದ ಮೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಗಳಿಗೆ ಜಲಮಾರ್ಗದ ನೇರ ಸಂಪರ್ಕವನ್ನು ಸ್ಥಾಪಿಸುವ ಯೋಜನೆಗೆ ಚಾಲನೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X