ನಟ ದುನಿಯಾ ವಿಜಿ ಪತ್ನಿಗೆ ಜಾಮೀನು
ಬೆಂಗಳೂರು, ನ.5: ನಟ ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನಾ ಅವರಿಗೆ ನ್ಯಾಯಾಲಯವು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ವಿಜಯ್ 2ನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಹಾಗೂ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಗರತ್ನಾ ಅವರಿಗೆ ಸೋಮವಾರ ನಗರದ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ. 50 ಸಾವಿರ ರೂ. ಬಾಂಡ್ ಒಬ್ಬರ ಶ್ಯೂರಿಟಿ, ವಿಚಾರಣೆಗೆ ಸಹಕರಿಸುವಂತೆ ಷರತ್ತು ವಿಧಿಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಪ್ರಕರಣವನ್ನು ನ.12ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.
ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿಗೌಡ ಅವರು ತಮ್ಮ ಮೇಲೆ ನಡೆದ ಹಲ್ಲೆ ನಡೆಸಲಾಗಿದೆ ಎಂದು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.
Next Story





