ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ವ್ಯಕ್ತಿ ಮತ್ಯು

ಬೆಂಗಳೂರು, ನ.6: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೋಮವಾರ ಈ ದುರ್ಘಟನೆ ನಡೆದಿದ್ದು, ನಂದಿನಿ ಲೇಔಟ್‌ನ ರಿಂಗ್ ರಸ್ತೆಯ ನರಸಿಂಹಸ್ವಾಮಿ ಬಡಾವಣೆಯಲ್ಲಿ ನಿರ್ಮಾಣ ಹಂತದ ಕಟ್ಟಡದ 2ನೆ ಮಹಡಿಯಿಂದ ಬಿದ್ದು ಸುಮಾರು 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮೃತ ವ್ಯಕ್ತಿಯ ಗುರುತು, ವಿಳಾಸ ಪತ್ತೆಯಾಗಿಲ್ಲ. ವ್ಯಕ್ತಿ ಕಟ್ಟಡಕ್ಕೆ ಏಕೆ ಬಂದರು, ಅವರು ಎಲ್ಲಿಯವರು ಎಂಬುದು ಇನ್ನೂ ತಿಳಿದುಬಂದಿಲ್ಲ.
ಸುದ್ದಿ ತಿಳಿದ ನಂದಿನಿಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಮತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
Next Story





